ಅಖಿಲ ಭಾರತ ಮಟ್ಟದ ಯುಪಿಎಸ್‌ಸಿ ಸಿವಿಲ್ ಸರ್ವಿಸ್ ಪರೀಕ್ಷೆ 2016ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು ಬಂಟ್ವಾಳದ ನವೀನ್ ಭಟ್ 37ನೇ ಕ್ರಮಾಂಕದಲ್ಲಿ ತೇರ್ಗಡೆ ಹೊಂದಿರುತ್ತಾರೆ.ಅವರು ಬಂಟ್ವಾಳ ತಾಲೂಕು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್‌ರ ಪುತ್ರ. ಬಿ.ಸಿ.ರೋಡಿನಲ್ಲಿ ವಾಸ್ತವ್ಯ ಹೊಂದಿದ್ದಾರೆ. ಮೂಲತ: ಉಡುಪಿ ಎಲ್ಲೂರಿನವರು.
ಅವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಮೂಡಬಿದಿರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್, ಬಂಟ್ವಾಳ ತಾಲೂಕು ಮೊಡಂಕಾಪು ಇನ್‌ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಗಿಸಿದ್ದು ಪ್ರೌಢ ಶಾಲೆ ಮತ್ತು ಪಿಯೂಸಿ ವಿದ್ಯಾಭ್ಯಾಸವನ್ನು ಅಳಿಕೆ ಶ್ರೀಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದು 2009ನೇ ಸಿಇಟಿ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ ಮೊದಲ ರ್‍ಯಾಂಕ್ ಪಡೆದಿದ್ದರು. ಈ ಸಂದರ್ಭದಲ್ಲಿಯೆ ಐಎಎಸ್ ಪರೀಕ್ಷೆ ಬರೆಯುವುದಾಗಿ ಅಪೇಕ್ಷೆ ವ್ಯಕ್ತ ಮಾಡಿದ್ದರು.ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿಯನ್ನು ಮುಗಿಸಿದ್ದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ತನ್ನ ಕನಸನ್ನು ನನಸಾಗಿಸಿಕೊಂಡಿದ್ದಾರೆ.