ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆಯಿರಿ: ನವೀನ್ ಭಟ್ ಸಲಹೆ

www.bantwalnews.com REPORT

ಜಾಹೀರಾತು

ಎಲ್ಲ ವೃತ್ತಿಗಳಲ್ಲಿ ಅಭದ್ರತೆ ಇದೆ. ಆದರೆ ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದವರು ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ 37ನೇ ಸ್ಥಾನ ಪಡೆದ ನವೀನ್ ಭಟ್. ಸಿವಿಲ್ ಸರ್ವೀಸ್ ಪರೀಕ್ಷೆ ತೇರ್ಗಡೆ ಹೊಂದಿದ ಬಳಿಕ ಬೆಂಗಳೂರಿನಿಂದ ಆಗಮಿಸಿದ ನವೀನ್ ಭಟ್,  ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿ, ಪರೀಕ್ಷೆಯ ಅನುಭವಗಳನ್ನು ಹಂಚಿಕೊಂಡರು.

ನನಗೆ ನನ್ನ ತಂದೆಯವರೇ ರೋಲ್ ಮಾಡೆಲ್

ನವೀನ್ ಭಟ್ ಅವರು ಬಂಟ್ವಾಳದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಉಮೇಶ್ ಭಟ್ ಮತ್ತು ವಿಜಯಲಕ್ಷ್ಮಿ ದಂಪತಿ ಪುತ್ರ. ವೈದ್ಯನಾಗುವುದೂ ಜನಸೇವೆಗೆ. ಐಎಎಸ್ ಅಧಿಕಾರಿಯಾಗುವುದೂ ಜನಸೇವೆಗೆ. ಅವುಗಳಲ್ಲಿ ಸಿವಿಲ್ ಸರ್ವೀಸ್ ಗೆ ಸೇರಿದರೆ ಹೆಚ್ಚು ಜನರ ಸಂಪರ್ಕ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ನಾನು ಇದನ್ನು ಆಯ್ಕೆ ಮಾಡಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜನಸಾಮಾನ್ಯರ ನಡುವೆ ಬೆರೆತು ಅವರ ಕಷ್ಟಗಳಿಗೆ ಸ್ಪಂದಿಸುವ ಅವಕಾಶ ದೊರಕಿತು. ನನಗೆ ನನ್ನ ತಂದೆಯವರೇ ರೋಲ್ ಮಾಡೆಲ್. ಅವರು ಜನರೊಂದಿಗೆ ಸ್ಪಂದಿಸುವ ಪರಿ, ಕೆಲಸದ ಬಗ್ಗೆ ಹೊಂದಿರುವ ಶ್ರದ್ಧೆ ನನಗೆ ಸಿವಿಲ್ ಸರ್ವೀಸ್ ಕಡೆಗೆ ಹೆಚ್ಚು ಆಸಕ್ತಿ ಮೂಡುವಂತೆ ಮಾಡಿತು. ಎಂಬಿಬಿಎಸ್ ಕಲಿಕೆಗೆ ಸೇರಿದಾಗಲೇ ಇದಕ್ಕೆ ತಯಾರಿಗಳನ್ನು ಮಾಡಿಕೊಂಡೆ ಎಂದರು.

ಜಾಹೀರಾತು

ನಾನು ಪಾಸ್ ಆಗುತ್ತೇನೆ ಎಂಬ ಆತ್ಮವಿಶ್ವಾಸ ಇರಲೇಬೇಕು. ಇದರ ಜೊತೆಗೆ ಮಾರ್ಗದರ್ಶನವೂ ಸೂಕ್ತ ಕ್ರಮದಲ್ಲಿ ದೊರಕಬೇಕು. ನಾನು ದಿನಕ್ಕೆ ಐದರಿಂದ ಆರು ಗಂಟೆ ಓದುತ್ತಿದ್ದೆ. ಸಹಜವಾಗಿಯೇ ಇದ್ದು, ವಿಷಯಗಳ ಬಗ್ಗೆ ಮನಮುಟ್ಟುವಂತೆ ಅಧ್ಯಯನ ಕೈಗೊಳ್ಳುವುದು ಹಾಗೂ ಗುಂಪು ಚರ್ಚೆಯಂಥ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಹೆಚ್ಚು ಜ್ಞಾನಸಂಪಾದನೆ ಸಾಧ್ಯ ಎಂದು ತನ್ನ ಅನುಭವ ಹೇಳಿದರು.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ, ಕಡು ಬಡತನ ಇಲ್ಲ. ವಿದ್ಯಾಭ್ಯಾಸ ವ್ಯವಸ್ಥೆಯೂ ಇಂಜಿನಿಯರಿಂಗ್, ಮೆಡಿಕಲ್ ಪ್ರೇರೇಪಣೆ ಒದಗಿಸುವುದರೊಂದಿಗೆ ಜನರ ಮನೋಸ್ಥಿತಿಯೂ ಸಿವಿಲ್ ಸರ್ವೀಸ್ ಕಡೆಗೆ ವಾಲುತ್ತಿಲ್ಲ ಎಂದು ಹೇಳಿದರು ನವೀನ್. ಇಲ್ಲಿ ಸಿಇಟಿ ತರಬೇತಿ ಸಹಿತ ವಿವಿಧ ಕೋಚಿಂಗ್ ಸೆಂಟರ್ ಗಳಿವೆ. ಆದರೆ ಐಎಎಸ್, ಕೆಎಎಸ್ ಕೋಚಿಂಗ್ ಸೆಂಟರ್ ಇಲ್ಲ. ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಕಡಿಮೆ. ಹೀಗಾಗಿ ಇಲ್ಲಿನವರು ಸಿವಿಲ್ ಸರ್ವೀಸ್ ಕಡೆಗೆ ಹೆಚ್ಚು ಆಸಕ್ತಿ ಹೊಂದಿರುವುದಿಲ್ಲ. ನಿಯಮಿತವಾದ ಓದು, ಸಮಕಾಲೀನ ವಿದ್ಯಮಾನಗಳ ಅರಿವು, ಪ್ರತಿಯೊಂದು ವಿಷಯಗಳ ಕಡೆಗಿನ ಆಸಕ್ತಿ, ಜನಸಾಮಾನ್ಯರೊಂದಿಗೆ ಬೆರೆಯುವುದನ್ನು ನಾವು ಮಾಡಿದರೆ ಸಿವಿಲ್ ಸರ್ವೀಸ್ ಗೆ ಸೇರುವ ಆಸಕ್ತಿಯೂ ಮೂಡುತ್ತದೆ. ಆರನೇ ತರಗತಿಯಿಂದಲೇ ಈ ಕೆಲಸವನ್ನು ನಾವು ಮಾಡಬಹುದು ಎಂದು ನವೀನ್ ಸಲಹೆ ನೀಡಿದರು.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ಗೆ ಭೇಟಿ ನೀಡಿದ ಯುಪಿಎಸ್ ಸಿ ಪರೀಕ್ಷೆಯಲ್ಲಿ ಆಯ್ಕೆಗೊಂಡ ನವೀನ್ ಭಟ್ ಅವರನ್ನು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕೋಶಾಧಿಕಾರಿ ವೆಂಕಟೇಶ ಬಂಟ್ವಾಳ, ಹರೀಶ ಮಾಂಬಾಡಿ, ಸಂದೀಪ್ ಸಾಲ್ಯಾನ್, ಕಿಶೋರ್ ಪೆರಾಜೆ, ಇಮ್ತಿಯಾಜ್ ಶಾ, ಚಂದ್ರಶೇಖರ ಕಲ್ಮಲೆ, ಜಯಾನಂದ ಪೆರಾಜೆ ಉಪಸ್ಥಿತರಿದ್ದರು.

 

ಜಾಹೀರಾತು

For Video Click:

ಜಾಹೀರಾತು

Also Read:

ನವೀನ್ ಭಟ್ 37ನೇ ರಾಂಕ್

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Harish Mambady
ಕಳೆದ 25 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Be the first to comment on "ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆಯಿರಿ: ನವೀನ್ ಭಟ್ ಸಲಹೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*