ಕಲ್ಲಡ್ಕ

ಜನಜೀವನ ಸಹಜಸ್ಥಿತಿ, ನಿಷೇಧಾಜ್ಞೆ ಮುಂದುವರಿಕೆ

ಕಲ್ಲಡ್ಕ ಸಹಿತ ಇಡೀ ಬಂಟ್ವಾಳ ತಾಲೂಕಿನಾದ್ಯಂತ ಜನಜೀವನ ಸಹಜಸ್ಥಿತಿಯಲ್ಲಿದ್ದು, ಶಾಂತಿಯ ವಾತಾವರಣವಿದೆ. ಆದರೆ ಆಡಳಿತ ಜೂನ್ 2ರವರೆಗೆ ವಿಸಿದ್ದ ನಿಷೇಧಾಜ್ಞೆಯನ್ನು ಮುಂಜಾಗರೂಕತಾ ಕ್ರಮವಾಗಿ ಮುಂದುವರಿಸಲಾಗಿದೆ. ಜೂನ್ 2ರವರೆಗೆ ಸೆಕ್ಷನ್ 144 ರ ಅನ್ವಯ ವಿಸಲಾಗಿದ್ದ ನಿಷೇಧಾಜ್ಞೆಯನ್ನು ಜೂನ್ 9 ರ ರಾತ್ರಿ 12 ಗಂಟೆಯವರೆಗೆ ವಿಸ್ತರಿಸಿ ಮಂಗಳೂರು ಉಪವಿಭಾಗ ದಂಡಾಕಾರಿ ಹಾಗೂ ಸಹಾಯಕ ಆಯುಕ್ತ ಎ.ಸಿ. ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಕಲ್ಲಡ್ಕದಲ್ಲಿ ಕಳೆದ ವಾರ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜೂನ್.2ರವರೆಗೆ ವಿಸಲಾಗಿತ್ತು. ಬಳಿಕ ಪೊಲೀಸ್ ಬಿಗು ಬಂದೋಬಸ್ತ್ ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿತ್ತು. ಜನರೂ ಘಟನೆಯನ್ನು ಮರೆಯುತ್ತಿದ್ದ ವೇಳೆಯಲ್ಲೇ ಮತ್ತೆ ನಿಷೇಧಾಜ್ಞೆ.

ಈ ಅವಯಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಸಲಾಗಿದೆ.

ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಸಿದೆ. ಯಾವುದೇ ರೀತಿಯ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಸಲಾಗಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೀಷ್ಠೆಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಚಿತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗಲು ಪ್ರೇರೇಪಿಸುವ ಕ್ರಮಗಳನ್ನು ನಿಷೇಸಿದೆ.

Also Read:

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts