ದ.ಕ. ಜಿಲ್ಲಾ ಎಸ್ಸೆಸ್ಸೆಫ್‌ನಿಂದ ’ನಾಳೆಗೊಂದು ನೆರಳು’ ಕಾರ್ಯಕ್ರಮ ಉದ್ಘಾಟನೆ

 www.bantwalnews.com report

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನಾಳೆಗೊಂದು ನೆರಳು ಎಂಬ ಘೋಷ ವಾಕ್ಯದೊಂದಿಗೆ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ  ಜಿಲ್ಲಾ ವ್ಯಾಪ್ತಿಯ ವಿವಿಧ ಕೇಂದ್ರಗಳಲ್ಲಿ ನಡೆಯುವ ಸಸಿ ವಿತರಣಾ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿರುವ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಎಸ್ಸಾರ್ಟಿಸಿ ಡಿಪ್ಪೊ ಮೆನೇಜರ್ ಇಸ್ಮಾಯೀಲ್, ಸಸಿ ನೆಡುವ ಕಾರ್ಯಕ್ರಮಗಳು ಸಾಂಕೇತಿಕಕ್ಕೆ ಸೀಮಿತವಾಗಿರದೆ ನೆಟ್ಟ ಸಸಿಗಳನ್ನು ಪೋಷಿಸಿ ಬೆಳೆಸುವ ಕಾರ್ಯ ಪ್ರತೀಯೊಬ್ಬರಿಂದ ಆಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಮಾತನಾಡಿ,ಎಸ್ಸೆಸ್ಸೆಫ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಡಿವಿಶನ್‌ಗಳಲ್ಲಿ ಜೂನ್ ೫ರಂದು ಹತ್ತು ಸಾವಿರ ಗಿಡಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜೂನ್ ೫ರ ಸಸಿ ವಿತರಣಾ ಕಾರ್ಯಕ್ರಮದ ಸಾಂಕೇತಿಕವಾಗಿ ಕಾರ್ಯಕ್ರಮದಲ್ಲಿ ಸಸಿಗಳನ್ನು ವಿತರಿಸಲಾಯಿತು. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಲಂದರ್ ಪದ್ಮುಂಜೆ, ಕೋಶಾಧಿಕಾರಿ ರಝಾಕ್ ಸಖಾಫಿ, ಎಸ್‌ವೈಎಸ್ ದಕ್ಷಿಣ ಕನ್ನಡ ಸದಸ್ಯ ಖಲೀಲ್ ಮುಸ್ಲಿಯಾರ್, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡ್ ಉಪಸ್ಥಿತರಿದ್ದರು. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಲಿ ತುರ್ಕಲಿಕೆ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.