ವಿದ್ಯಾರ್ಥಿಗಳು ತಮಗೆ ದೊರಕಿದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಎಂದು ವಾಯುದಳದ ನಿವೃತ್ತ ಅಧಿಕಾರಿ ಮತ್ತು ಭವಾನಿಶಂಕರ್ ಶೆಟ್ಟಿ ಹೇಳಿದರು.
ಅವರು ಇಲ್ಲಿನ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಬಾಲ್ಯದಲ್ಲಿಯೇ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡರೆ, ಕಠಿಣ ಶ್ರಮವಹಿಸಿ ಅಧ್ಯಯನ ಶೀಲರಾದರೆ ನಿಮ್ಮ ಗುರಿಯನ್ನು ಸಾಧಿಸಬಹುದು. ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು. ಹಿರಿಯ ಶಿಕ್ಷಕಿಯರಾದ ವೀರಾ ಸಿಕ್ವೇರಾ ಮತ್ತು ಜೂಲಿ ಟಿ ಜೆ ಉಪಸ್ಥಿತರಿದ್ದರು. ಜೂಲಿ ಟಿ ಜೆ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಶಾಲಾ ನಾಯಕಿ ಜೆನಿವಾ ವೆಸ್ಲಿಯಾ ವಾಸ್, ಉಪನಾಯಕ ನಿನಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿ ವಂದಿಸಿದರು.
Be the first to comment on "ವಿದ್ಯಾರ್ಥಿ ಸಂಘ ಉದ್ಘಾಟನೆ"