ಬಂಟ್ವಾಳ

ವಿದ್ಯಾರ್ಥಿ ಸಂಘ ಉದ್ಘಾಟನೆ

ವಿದ್ಯಾರ್ಥಿಗಳು ತಮಗೆ ದೊರಕಿದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಎಂದು ವಾಯುದಳದ ನಿವೃತ್ತ ಅಧಿಕಾರಿ ಮತ್ತು ಭವಾನಿಶಂಕರ್ ಶೆಟ್ಟಿ ಹೇಳಿದರು.

ಅವರು ಇಲ್ಲಿನ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಜಾಹೀರಾತು

ಬಾಲ್ಯದಲ್ಲಿಯೇ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡರೆ, ಕಠಿಣ ಶ್ರಮವಹಿಸಿ ಅಧ್ಯಯನ ಶೀಲರಾದರೆ ನಿಮ್ಮ ಗುರಿಯನ್ನು ಸಾಧಿಸಬಹುದು. ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು. ಹಿರಿಯ ಶಿಕ್ಷಕಿಯರಾದ ವೀರಾ ಸಿಕ್ವೇರಾ ಮತ್ತು ಜೂಲಿ ಟಿ ಜೆ ಉಪಸ್ಥಿತರಿದ್ದರು.  ಜೂಲಿ ಟಿ ಜೆ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.  ಶಾಲಾ ನಾಯಕಿ ಜೆನಿವಾ ವೆಸ್ಲಿಯಾ ವಾಸ್, ಉಪನಾಯಕ ನಿನಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.