ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಇರಾ ತಾಳಿತ್ತಬೆಟ್ಟುವಿನಲ್ಲಿ ಇರಾ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಉಚಿತ ಪರ್‍ಯ ಪುಸ್ತಕ ಸಮವಸ್ತ್ರ ವಿತರಣಾ ಕಾರ್ಯಕ್ರಮ ಆಚರಿಸಲಾಯಿತು.
ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಡಿ ಎಸ್ ಗಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ಭವಿಷ್ಯದ ಸತ್‌ಪ್ರಜೆಯಾಗುವಂತೆ ಕರೆ ನೀಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸಬೇಕಾದ ಅವಶ್ಯಕತೆಯನ್ನು ತಿಳಿಸಿದರು. ಈ ಸಂದರ್ಭ ಸರಕಾರದಿಂದ ನೀಡುವ ಉಚಿತ ಸಮವಸ್ತ್ರ ಮತ್ತು ಉಚಿತ ಪರ್‍ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮುರಳೀಧರ ಬಂಡಾರಿ, ಉಪಾಧ್ಯಕ್ಷರಾದ ಉಷಾ , ಎಸ್.ಡಿ.ಎಂ.ಸಿ ನಾಮ ನಿರ್ದೇಶಿತ ಸದಸ್ಯರಾದ ಮೊಯಿದಿನ್‌ಕುಂಞ, ಹಾಗೂ ಪ್ರಭಾರ ಮುಖ್ಯ ಶಿಕ್ಷಕಿ ಶಶಿ.ಬಿ ಪರಿಸರ ಕ್ಲಬ್‌ನ ನೋಡೆಲ್ ಶಿಕ್ಷಕಿ ಶಾಂತಾ ಕುಮಾರಿಂ ಉಪಸ್ಥಿತರಿದ್ದರು. ಪರಿಸರ ಕ್ಲಬ್‌ನ ನೋಡೆಲ್ ಶಿಕ್ಷಕ ಶಂಕರ ಸ್ವಾಗತಿಸಿ , ಪರಿಸರ ದಿನಾಚರಣೆಯ ಕುರಿತು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಶಾಂತಾ ವಂದಿಸಿ ಜೋನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ , ಎಸ್.ಡಿ.ಎಂ.ಸಿ ಸರ್ವ ಸದಸ್ಯರು , ಪೋಷಕರು , ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಬಳಿಕ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಪರಿಸರ ಕ್ಲಬ್‌ನ ಸದಸ್ಯರು ಪರಿಸರ ಸ್ವಚ್ಛತೆಯಲ್ಲಿ ಭಾಗವಹಿಸಿದರು. ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಸಹಕರಿಸಿದರು.
Be the first to comment on "ಇರಾದಲ್ಲಿ ವಿಶ್ವ ಪರಿಸರ ದಿನಾಚರಣೆ"