ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಸಂಚಯಗಿರಿ ನಿವಾಸಿ ದಾಮೋದರ ಇವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ಪರಿಸರದಲ್ಲಿ ಸ್ವಯಂಸೇವಕರಾಗಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಮೂಲಕ ಗುರುತಿಸಿ ಕೊಂಡಿರುವ ಇವರು ಸರ್ಕಾರಿ ಸೇವೆಯಲ್ಲಿ ನಿವೃತ್ತಿಯ ಬಳಿಕ ಸಾಮಾಜಿಕ ಕಾರ್ಯಕರ್ತರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಬಂಟ್ವಾಳ ಇಲ್ಲಿ ಸನ್ಮಾನ ಸಮಾರಂಭ ನಡೆಯಿತು. ರೋಟರಿ ಗವರ್ನರ್ ಪ್ರತಿನಿ ಪ್ರಕಾಶ್ ಕಾರಂತ್ ಸನ್ಮಾನ ಮಾಡಿ ಶುಭ ಹಾರೈಸಿದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ರಿತೇಶ್ ಬಾಳಿಗ, ಕಾರ್ಯದರ್ಶಿ ಉಮೇಶ್ ನಿರ್ಮಲ್, ಜೊತೆ ಕಾರ್ಯದರ್ಶಿ ದಿವ್ಯಾ ಕರುಣಾಕರ್ ಸಮಾರಂಭದಲ್ಲಿ ಭಾಗವಹಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೋಟರಿ ಕ್ಲಬ್ ನಿಂದ ಸನ್ಮಾನ ಕಾರ್ಯಕ್ರಮ"