ರಾಜ್ಯ ಸರಕಾರ ಕೇಂದ್ರದತ್ತ ಬೊಟ್ಟು ಮಾಡಿ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ ಎಂದು ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಜೀತೇಂದ್ರ ಕೊಟ್ಟಾರಿ ಟೀಕಿಸಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮೂರು ವರ್ಷಗಳ ಸಾಧನೆಯನ್ನು ಬಿತ್ತರಿಸುವ ಮೋದಿ ಫೆಸ್ಟ್ ಅಂಗವಾಗಿ ಬಿ.ಸಿ.ರೋಡಿನಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಅಕ್ರಮ ಮರಳುದಂಧೆ:
ಅಕ್ರಮ ಮರಳುದಂಧೆ ಅವ್ಯವಾಹತವಾಗಿ ನಡೆಯಿತ್ತಿದೆ, ದಿನವೊಂದಕ್ಕೆ ಸಾವಿರಾರು ಲೋಡು ಮರಳು ಅಕ್ರಮವಾಗಿ ಹೊರಜಿಲ್ಲೆಗಳಿಗೆ ಸಾಗಾಟವಾಗುತ್ರಿದ್ದರೂ ರಾಜಕೀಯ ಒತ್ತಡದಿಂದ ಸಂಬಂಧಿಸಿದ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ ಎಂದು ಬಿಜೆಪಿ ನಾಯಕ ರಾಜೇಶ್ ನಾಕ್ ಉಳಿಪಾಡಿಗುತ್ತು ಈ ಸಂದರ್ಭ ಆರೋಪಿಸಿದರು. ಬಂಟ್ವಾಳದಲ್ಲಿ ಸಮಗ್ರ ಒಳಚರಂಡಿಯ ವ್ಯವಸ್ಥೆ ಇಲ್ಲದೆ ಕೊಳಚೆ,ತ್ಯಾಜ್ಯ ನೀರು ನೇತ್ರಾವತಿ ನದಿ ಒಡಲು ಸೇರುತ್ತಿದೆ. ಈ ನಿಟ್ಟಿನಲ್ಲಿ ಪುರಸಭೆ ಮೌನವಹಿಸಿದೆ. ಒಂದು ಪಕ್ಷದವರಿಗೆ ಸೀಮಿತವಾಗಿ ೯೪ ಸಿಯಡಿ ಹಕ್ಕುಪತ್ರ ಹಂಚುವುದರೊಂದಿಗೆ ತಾರತಮ್ಯವೆಸಗಲಾಗುತ್ತಿದೆ ಎಂದು ಆರೋಪಿಸಿದರು.
ಪಕ್ಷದ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್ ಅವರು ಮಾತನಾಡಿ ಕೇಂದ್ರ ಸರಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ರುಕ್ಮಯ ಪೂಜಾರಿ, ಜಿಲ್ಲಾ ವಕ್ತಾರ ವಿಕಾಸ ಪುತ್ತೂರು , ವಕೀಲ ರಾಜಾರಾಮ ನಾಯಕ್, ಗಂಗಾಧರ ಪಲ್ಲಮಜಲು, ಮಹಾಬಲಶೆಟ್ಟಿ, ಉಪಾಧ್ಯಕ್ಷರಾದ ದೇವಪ್ಪ ಪೂಜಾರಿ, ಕ್ಷೇತ್ರ ಕಾರ್ಯದರ್ಶಿಗಳಾದ ರಮನಾಥ ರಾಯಿ, ಸೀತಾರಾಮ ಪೂಜಾರಿ, ಸೀಮಾ ಮಾಧವ ಮತ್ತು ಕ್ಷೇತ್ರದ ಪದಾಧಿಕಾರಿಗಳು ವಿವಿಧ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ ಸ್ವಾಗತಿಸಿದರು.ಇನ್ನೊರ್ವ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ ನಿರೂಪಿಸಿ, ವಂದಿಸಿದರು.