42 ಲಕ್ಷ ರೂ ಸಹಾಯಧನ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಸುಮಾರು 500ಕ್ಕೂ ಅಧಿಕ ಫಲಾನುಭವಿಗಳಿಗೆ ನಾನಾ ಯೋಜನೆಗಳ ಸಹಾಯಧನವನ್ನು ತಮ್ಮ ಬಿ.ಸಿ.ರೋಡಿನ ಕಚೇರಿಯಲ್ಲಿ ವಿತರಿಸಿದರು.

ಈ ಸಂದರ್ಭ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಜಿಪಂ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ರೆವೆನ್ಯೂ ಇನ್ಸ್‌ಪೆಕ್ಟರ್ ಗಳಾದ ದಿವಾಕರ್ ಮುಗುಳ್ಯ, ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ಅಂತ್ಯಸಂಸ್ಕಾರ ಯೋಜನೆಯಲ್ಲಿ ಬಿಪಿಎಲ್ ಕಾರ್ಡಿನ ಸುಮಾರು 500 ಫಲಾನುಭವಿಗಳಿಗೆ ಒಟ್ಟು 30 ಲಕ್ಷ ರೂ ಹಾಗೂ ಕಳೆದ ತಿಂಗಳು ಬಂಟ್ವಾಳದಲ್ಲಿ ಸಿಡಿಲಾಘಾತಕ್ಕೆ ಮೃತಪಟ್ಟ ಮೂವರ ಕುಟುಂಬದವರಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಸಹಾಯಧನವನ್ನು ಪ್ರಾಕೃತಿಕ ವಿಕೋಪ ನಿಧಿಯಡಿ ವಿತರಿಸಲಾಯಿತು.