ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆಯ ಪೆಟ್ರೋಲ್ ಬಂಕ್‌ವೊಂದರ ಮುಂಭಾಗದ ಚರಂಡಿಯಲ್ಲಿ ಅಪರಿಚಿತ ಯುವಕನೊಬ್ಬನ ಮೃತ ಶರೀರವೊಂದು ಸೋಮವಾರ ಸಂಜೆ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿರುವ ಶವದ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಗ್ರಾಮಾಂತರ ಠಾಣಾ ಪೊಲೀಸರು ತಿಳಿಸಿದ್ದಾರೆ.
ಪೊದೆಯಿಂದ ಆವರಿಸಿದ್ದ ಚರಂಡಿಯಲ್ಲಿದ್ದ ಮೃತದೇಹವನ್ನು ಸ್ಥಳೀಯರು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳದಲ್ಲಿ ಸಾರ್ವಜನಿಕರು ನೆರೆದಿದ್ದು, ಪ್ರಕರಣದ ಸುತ್ತ ಸಂಶಯ ಮೂಡಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣಾಧಿಕಾರಿ, ಸಿಬ್ಬಂದಿಗಳು ಭೇಟಿ ನೀಡಿದ್ದು, ಮಹಜರು ನಡೆಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…