2017-18ನೇ ಸಾಲಿನಲ್ಲಿ ದ.ಕ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುತ್ತದೆ.
ಅರ್ಜಿಯನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಇವರಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ ಶಾಲೆ/ಕಾಲೇಜು/ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ಧೃಡೀಕರನಗೊಳಿಸಿ ಅರ್ಜಿಯನ್ನು ಆಯ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಇವರಿಗೆ ಸಲ್ಲಿಸಲು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.