ಕೊಡ್ಮಣ್ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಣಾಮಕಾರಿ ಭಾಷಣ ತರಬೇತಿ

ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ತರಬೇತಿ ಶಿಬಿರಗಳ ಅಗತ್ಯವಿದ್ದು ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ ಹೇಳಿದರು. ಇವರು ಬಂಟ್ವಾಳ ಕೊಡ್ಮಣ್ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಸ್ತಿಕಾ ಕನ್ಸಲ್ಟೆನ್ಸಿ ಸರ್ವಿಸಸ್ ವತಿಯಿಂದ ನಡೆದ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮೇರಮಜಲು ಗ್ರಾ.ಪಂ ಅಧ್ಯಕ್ಷ ಸತೀಶ್ ನಾಯ್ಕ ಮಾತನಾಡಿ ಇಂತಹ ಕಾರ್ಯಕ್ರಮಗಳು ಕೇವಲ ಖಾಸಗಿ ಶಾಲೆಗಳಲ್ಲಿ ಮಾತ್ರ ನಡೆಯುತ್ತಿದ್ದು ಈಗ ಸರ್ಕಾರಿ ಶಾಲೆಯಲ್ಲಿ ಕೂಡ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಕೆಲಸ ಎಂದರು.

ಇದೇ ಸಂದರ್ಭ ಹತ್ತನೇ ತರಗತಿಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.  ಜೆ.ಸಿ. ವಲಯ ತರಬೇತುದಾರರಾದ ಅಕ್ಷತ ಗಿರೀಶ್ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಕಾಂತಪ್ಪ ಶೆಟ್ಟಿ, ಸ್ವಸ್ತಿಕಾ ಸಂಸ್ಥೆಯ ಪರಮೇಶ್ವರ ಮೊಯಿಲಿ, ಜಗದೀಶ್ ಹೊಳ್ಳ, ನರಸಿಂಹ ಹೇರ್ಳೆ, ಶಾಲಾ ಮುಖ್ಯ ಶಿಕ್ಷಕರಾದ ರಾಮಚಂದ್ರ ರಾವ್ ಉಪಸ್ಥಿತರಿದ್ದರು. ಶಿಕ್ಷಕ ಶ್ರೀಧರ ಭಟ್ ಸ್ವಾಗತಿಸಿ, ಸ್ವಸ್ತಿಕಾ ಸಂಸ್ಥೆಯ ಹರಿಕೃಷ್ಣ ಅಡಿಗ ವಂದಿಸಿದರು. ಶಿಕ್ಷಕ ಸಿದ್ಧಿಕ್ ಕಾರ್ಯಕ್ರಮ ನಿರೂಪಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊಡ್ಮಣ್ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಣಾಮಕಾರಿ ಭಾಷಣ ತರಬೇತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*