ಕಲ್ಲಡ್ಕ ಪೇಟೆಯಲ್ಲಿ ಮತ್ತೆ ಅಶಾಂತಿ ತಲೆದೋರಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಮಂಗಳವಾರ ಹಲ್ಲೆ, ಕಲ್ಲು ತೂರಾಟ, ವಾಹನಗಳಿಗೆ ಹಾನಿ ಘಟನೆಗಳು ನಡೆದಿವೆ.
ಸಂಜೆ ರತ್ನಾಕರ ಶೆಟ್ಟಿ ಮತ್ತು ರವಿ ಭಂಡಾರಿ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ. ಗಾಯಾಳು ರತ್ನಾಕರ ಶೆಟ್ಟಿ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಖಲೀಲ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಅವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಬಳಿಕ ಕಲ್ಲಡ್ಕ ಪೇಟೆಯಲ್ಲಿ ಕಲ್ಲು ತೂರಾಟ ನಡೆದಿವೆ. ಈ ಸಂದರ್ಭ ಎಸ್.ಐ.ರಕ್ಷಿತ್ ಅವರಿಗೂ ಕಲ್ಲೇಟು ತಾಗಿದೆ. ಕೆಲ ಹೊತ್ತಿನ ಬಳಿಕ ಹೆಚ್ಚಿನ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಎಸ್ಪಿ ಭೂಷಣ್ ಜಿ. ಬೊರಸೆ, ಡಿವೈಎಸ್ಪಿ ರವೀಶ್ ಸಿ.ಆರ್., ಭಾಸ್ಕರ ಶೆಟ್ಟಿ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ತಹಶೀಲ್ದಾರ್ ಪುರಂದರ ಹೆಗ್ಡೆ ಅವರೂ ಸ್ಥಳಕ್ಕಾಗಮಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…