ಬಂಟ್ವಾಳ

ಮಂಚಿಯಲ್ಲಿ ಕಂದಾಯ ಅದಾಲತ್

ಕಂದಾಯ ಇಲಾಖೆ ವತಿಯಿಂದ ಕಂದಾಯ ಅದಾಲತ್ ಕಾರ್ಯಕ್ರಮ ಮಂಚಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಮಂಚಿ, ಸಜಿಪ ಮೂಡ  ಹಾಗೂ ಸಜಿಪ ಮುನ್ನೂರು ಗ್ರಾಮಗಳಿಗೆ ಸಂಬಂಧಿಸಿದ ಈ ಕಾರ್ಯಕ್ರಮದಲ್ಲಿ ಕಂದಾಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದರು‌.

ಸಾರ್ವಜನಿಕರಿಗೆ ಸರಕಾರದ ಸೇವೆ ಪಡೆಯಲು ಕಂದಾಯ ಅದಾಲತ್ ಅನುಕೂಲ ವ್ಯವಸ್ಥೆ ಕಲ್ಪಿಸಿದ್ದು, ಈ ಯೋಜನೆಯ ಸದುಪಯೋಗ ಸಾರ್ವಜನಿಕರು ಪಡೆಯಬೇಕು ಎಂದು ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ ಹೇಳಿದರು. ತಾಲೂಕು ಕಚೇರಿ ಸಿಬ್ಬಂದಿಗಳಾದ ಗ್ರೆಟ್ಟಾ ಮಸ್ಕರೇಞಸ್, ರೇಖಾ, ಗ್ರಾಮ ಕರಣಿಕರಾದ ನವೀನ್. ಟಿ,

ಯಶ್ವಿತ  ಗ್ರಾಮ ಸಹಾಯಕರಾದ ಸಂಜೀವ, ನವೀನ್ , ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಮೀಳಾ. ಉಪಾಧ್ಯಕ್ಷರಾದ ಮೋಹನ್ ದಾಸ್ ಹಾಜರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts