ಮತೀಯವಾದಿಗಳಿಂದ ಅಲ್ಲಲ್ಲಿ ಅಹಿತಕರ ಘಟನೆ ನಡೆಯುತ್ತಿದ್ದು, ಈ ಕುರಿತು ಪ್ರಜ್ಞಾವಂತ ಜನಸಮೂಹ ಜಾಗೃತರಾಗಲಿ. ಸಾಮರಸ್ಯ ತುಂಬಿದ ಸಮಾಜ ನಿರ್ಮಾಣವಾಗಲಿ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಪವಿತ್ರ ರಂಝಾನ್ ಉಪವಾಸದ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶನಿವಾರ ಸಂಜೆ ಬಿ.ಸಿ.ರೋಡು ಅಲ್‌ಖಝಾನಾ ಹಾಲ್ ನಲ್ಲಿ ಆಯೋಜಿಸಲಾದ ಇಫ್ತಾರ್ ಸೌಹಾರ್ದ ಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲರ ಮನಸ್ಸಿಗೆ ಪ್ರೀತಿಯನ್ನು ಹಂಚುವ ಮನಸ್ಸನ್ನು ಅಲ್ಲಾಹನು ದಯಪಾಲಿಸಲಿ ಎಂಬುದು ನಮ್ಮ ಪ್ರಾರ್ಥನೆ ಎಂದರು.
ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್ ಮಾತನಾಡಿ, ಸಚಿವ ರೈ ಅವರು ಇಫ್ತಾರ್ ಕೂಟವನ್ನು ಪ್ರತೀವರ್ಷ ಆಯೋಜಿಸುವ ಮೂಲಕ ಸಮಾಜಕ್ಕೆ ಸಾಮರಸ್ಯದ ಸಂದೇಶ ನೀಡುತ್ತಿದ್ದಾರೆ ಎಂದರು.
ಈ ಬಾರಿ ಇಫ್ತಾರ್ ಕೂಟಕ್ಕೆ ನಿರೀಕ್ಷೆಗೂ ಮೀರಿ ಜನ ಸೇರಿರುವುದು ರಮಾನಾಥ ರೈ ಅವರ ಮೇಲಿರುವ ಪ್ರೀತಿಗೆ ಸಾಕ್ಷಿ ಎಂದು ಸಂಘಟಕರು ನುಡಿದರು.
ಇರ್ಷಾದ್ ಉಸ್ತಾದ್ ದುಃವಾ ನೆರವೇರಿಸಿದರು, ಹಬೀಬ್ ಉಸ್ತಾದ್, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಕಾಂಗ್ರೆಸ್ ಮುಖಂಡ ಹರೀಶ್ ಕುಮಾರ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಶಾಹುಲ್ ಹಮೀದ್, ಪದ್ಮಶೇಖರ ಜೈನ್, ಮಾಜಿ ಜಿ.ಫಂ.ಸದಸ್ಯ ಉಮ್ಮರ್ ಫಾರೂಕ್, ಬೇಬಿಕುಂದರ್, ಪದ್ಮನಾಭ ರೈ ಉಪಸ್ಥಿತರಿದ್ದರು. ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಸ್ವಾಗತಿಸಿದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
Be the first to comment on "ಸಾಮರಸ್ಯ ತುಂಬಿದ ಸಮಾಜ ನಿರ್ಮಾಣವಾಗಲಿ: ರಮಾನಾಥ ರೈ"