ಬಿ.ಸಿ.ರೋಡಿನ ಪರಿಸರದಲ್ಲಿ ಹಲವಾರು ವರ್ಷಗಳಿಂದ ಮಾದರಿ ಅವಿಭಕ್ತ ಕುಟುಂಬದ ಜೀವನ ನಡೆಸುತ್ತಿರುವ ಗಣೇಶ್ ಶೆಣೈ ಅವರ ಕುಟುಂಬ ಸದಸ್ಯರಿಗೆ ಸನ್ಮಾನ ಸಮಾರಂಭ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ರೋಟರಿ ಕ್ಲಬ್ ಬಂಟ್ವಾಳ ಇಲ್ಲಿ ನಡೆಯಿತು.
ವಿಶ್ವ ಕುಟುಂಬ ದಿನದ ಅಂಗವಾಗಿ ನಡೆದ ಸಭೆಯಲ್ಲಿ ಗಣೇಶ್ ಶೆಣೈ ಅವರ ಮಕ್ಕಳಾದ ಗುರು ದತ್ ಶೆಣೈ, ನಾಗೇಶ್ ಶೆಣೈ, ವಲ್ಲಭೇಶ್ ಶೆಣೈ, ಪಾಂಡುರಂಗ ಶೆಣೈ ದಂಪತಿಗಳಿಗೆ ಸನ್ಮಾನ ವನ್ನು ರೋಟರಿ ಗವರ್ನರ್ ಪ್ರತಿನಿಧಿ ಪ್ರಕಾಶ್ ಕಾರಂತ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಅಬ್ದುಲ್ ರಝಕ್ ಅನಂತಾಡಿಯವರು ನೆರವೇರಿಸಿದರು. ಸಮಾರಂಭದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ, ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಉಮೇಶ್ ನಿರ್ಮಲ್ ಧನ್ಯವಾದ ಸಮರ್ಪಣೆ ಮಾಡಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅವಿಭಕ್ತ ಕುಟುಂಬ ಸದಸ್ಯರಿಗೆ ಸನ್ಮಾನ"
Be the first to comment on "ಅವಿಭಕ್ತ ಕುಟುಂಬ ಸದಸ್ಯರಿಗೆ ಸನ್ಮಾನ"