ಕಲ್ಲಡ್ಕದಲ್ಲಿ ನಡೆದ ಅಹಿತಕರ ಘಟನೆ ಸಂದರ್ಭ ಪೊಲೀಸ್ ಇಲಾಖೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರು ಶನಿವಾರ ಬಂಟ್ವಾಳ ನಗರ ಠಾಣೆಗೆ ಆಗಮಿಸಿ ಕಲ್ಲಡ್ಕದಲ್ಲಿ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಮೊಕ್ಕಾಂ ಹೂಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಭೂಷಣ್ ಜಿ. ಬೊರಸೆಯವರೊಂದಿಗೆ ಘಟನೆಯ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೇದಮೂರ್ತಿ ಉಪಸ್ಥಿತರಿದ್ದರು.ಹಲ್ಲೆ ಆರೋಪಿಗಳ ಮನೆಯವರನ್ನು ವಿಚಾರಣೆ ನೆಪದಲ್ಲಿ ಠಾಣೆಗೆ ಕರೆತರುವುದನ್ನು ಆಕ್ಷೇಪಿಸಿದ ಅವರು ಕೂಡಲೇ ಬಿಡುವಂತೆ ಒತ್ತಾಯಿಸಿದರು.
ಇದಕ್ಕೂ ಮೊದಲು ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಅವರು ಭೇಟಿ ನೀಡಿದರು. ಬಳಿಕ ಬಿ.ಸಿ.ರೋಡ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶೋಭಾ ಪೊಲೀಸ್ ಕಾರ್ಯವೈಖರಿ ಮತ್ತು ರಾಜ್ಯ ಸರಕಾರದ ಧೋರಣೆಗಳನ್ನು ಟೀಕಿಸಿದರು.
ಪೊಲೀಸರು ಅಮಾಯಕರನ್ನು ಬಂಧಿಸುವುದನ್ನು ಬಿಟ್ಟು ನೈಜ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ವಿಧಾನಪರಿಷತ್ತು ಮಾಜಿ ಸದಸ್ಯ ಎ.ಮೋನಪ್ಪ ಭಂಡಾರಿ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪ್ರಮುಖರಾದ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಜಿತೇಂದ್ರ ಕೊಟ್ಟಾರಿ, ಉಮನಾಥ್ ಕೊಟ್ಯಾನ್, ಬ್ರಿಜೇಶ್ ಚೌಟ, ಕಿರಣ್ ಕುಮಾರ್, ದಿನೇಶ್ ಅಮ್ಟೂರು, ಸುರೇಶ್ ಶೆಟ್ಟಿ ಗುರ್ಮೆ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಹರೀಶ್ ಪೂಂಜಾ, ವಜ್ರನಾಥ್ ಕಲ್ಲಡ್ಕ, ರಮಾನಾಥ ರಾಯಿ ಮೊದಲಾದವರು ಉಪಸ್ಥಿತರಿದ್ದರು.