’ಸತ್ಪ್ರಜೆಗಳ ನಿರ್ಮಾಣವಾಗಬೇಕು, ವಿದ್ಯೆಯೆಂಬುದು ಕೇವಲ ಉದ್ಯೋಗಕ್ಕೆ ಸೀಮಿತವಾಗಿರದೆ ಅದು ಸದ್ಗುಣಗಳನ್ನು ರೂಪಿಸುವಲ್ಲಿ ಸಹಕಾರಿಯಾಗ ಬೇಕು, ಆಧುನಿಕ ಶಿಕ್ಷಣದೊಂದಿಗೆ ಆಧ್ಯಾತ್ಮ ಶಿಕ್ಷಣ ದೊರೆತಾಗ ಅಲ್ಲಿ ಸತ್ಪ್ರಜೆಗಳ ಬೆಳವಣಿಗೆ ಸಾಧ್ಯ’ ಎಂದು ಪರಮಪೂಜ್ಯ ಸಾಧ್ವಿ ಶ್ರೀ ಮಾತಾನಂದಮಯಿಯವರು ಒಡಿಯೂರು ಶ್ರೀ ಗುರುದೇವ ಗುರುಕುಲ ಕನ್ಯಾನ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನವಿತ್ತರು.
ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕನ್ಯಾನ ಗ್ರಾಮ ಸಮಿತಿಯ ಅಧ್ಯಕ್ಷರಾದ ಕೆ.ಪಿ. ರಘುರಾಮ ಶೆಟ್ಟಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ನಿಕಟಪೂರ್ವ ಅಧ್ಯಕ್ಷರು ಮತ್ತು ಒಡಿಯೂರು ಶ್ರೀ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ನಿರ್ದೇಶಕರು ಆದ ಪಿ. ಲಿಂಗಪ್ಪ ಗೌಡ, ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷರು ಆದ ಯನ್.ಕೆ. ಈಶ್ವರ್ ಭಟ್, ಕನ್ಯಾನ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ವಿಜಯ ಶಂಕರ ಆಳ್ವ ಮತ್ತು ಶ್ರೀ ಗುರುದೇವ ಕೈಗಾರಿಕಾ ತರಭೇತಿ ಸಂಸ್ಥೆಯ ಪ್ರಾಂಶುಪಾಲರಾದ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು. ಶಾಲಾ ಸಂಚಾಲಕರಾದ ಸೇರಾಜೆ ಗಣಪತಿ ಭಟ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಶ್ರೀ ಗುರುದೇವ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಜಯಪ್ರಕಾಶ್ ಶೆಟ್ಟಿ ಎ. ಕಾರ್ಯಕ್ರಮ ನಿರ್ವಹಿಸಿದರು. ಮಾತಾಜಿ ಸಂಧ್ಯಾ ವೈ. ಪ್ರಾರ್ಥಿಸಿ ವಂದಿಸಿದರು.