ಬಂಟ್ವಾಳ

ಬಿಆರ್‌ಎಂಪಿಸಿ ಶಾಲೆಯಲ್ಲಿ ಯೋಗ ದಿನಾಚರಣೆ

ವಿಶ್ವಯೋಗ ದಿನಾಚರಣೆಯ ಅಂಗವಾಗಿ ಇಲ್ಲಿನ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳು ಯೋಗಾಸನವನ್ನು ಪ್ರದರ್ಶಿಸಿದರು.

ಯೋಗ ಪಟುಗಳಾದ ಹಿಮಾಂಶು ರಂಜನ್, ನಿಖಿಲ್ ಹಾಗೂ ಗಣೇಶ್ ನಾಯಕ್ ಸೂರ್ಯ ನಮಸ್ಕಾರ ಸಹಿತ ಚಕ್ರಾಸನ, ವೃಕ್ಷಾಸನ, ಮಯೂರಾಸನ, ಬಕಾಸನ, ಪದ್ಮಾಸನ, ಹಲಾಸನ, ವಜ್ರಾಸನ, ಗೋಮುಖಾಸನ ಮೊದಲಾದ ಆಸನಗಳನ್ನು ಪ್ರದರ್ಶಿಸಿದರು. ಯೋಗ ಸಂಬಂಧಿತ ರಸಪ್ರಶ್ನೆ, ಲೇಖನಗಳನ್ನು ಪ್ರಸ್ತುತಪಡಿಸಿದರು. ಯೋಗದಿಂದ ಹೇಗೆ ಆರೋಗ್ಯ ವೃದ್ಧಿಸುತ್ತದೆ ಎಂಬ ಕುರಿತು ಜಾಗೃತಿಮೂಡಿಸಲಾಯಿತು.  ಎಲ್ಲ ವಿದ್ಯಾರ್ಥಿಗಳು, ಶಿಕ್ಷಕವರ್ಗ ಕಾರ್‍ಯಕ್ರಮದಲ್ಲಿ ಪಾಲ್ಗೊಂಡರು.  ದೈಹಿಕ ಶಿಕ್ಷಣ ತರಬೇತುದಾರರಾದ ಶ್ರುತಿಕಾ ಮಾರ್ಗದರ್ಶನ ನೀಡಿದರು.  ಹತ್ತನೇ ತರಗತಿಯ ಯಾಶಲ್ ಮಿನೇಜಸ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ