ಕೇಂದ್ರವೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಕೃಷಿ ಸಾಲವನ್ನು ಮನ್ನಾ ಮಾಡಿ ರೈತರಿಗೆ ನೆರವಾಗುವಲ್ಲಿ ರಾಜ್ಯದಲ್ಲಿನ ಕೇಂದ್ರದ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರು ಶ್ರಮಿಸಬೇಕು ಎಂದು ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.
ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪ ಮತ್ತು ಬರಗಾಲದಿಂದ ರಾಜ್ಯದಲ್ಲಿನ ರೈತರು ತತ್ತರಿಸುತ್ತಿದ್ದು ಸಹಕಾರಿ ಸಂಸ್ಥೆಗಳಿಂದ ಪಡೆದ ಬೆಳೆ ಸಾಲವನ್ನು ಮರು ಪಾವತಿಸಲಾಗದೆ ಕಂಗಾಲಾಗಿರುವ ಪರಿಸ್ಥಿತಿಯನ್ನು ಮನಗಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಜೂನ್ 20ರವರೆಗೆ ಕೃಷಿ ಅಲ್ಪಾವಧಿ ಸಾಲವನ್ನು ಪಡೆದಿರುವ ರೈತರ ಅಲ್ಪಾವಧಿ ಕೃಷಿ ಮತ್ತು ಬೆಳೆ ಸಾಲದಲ್ಲಿ 50 ಸಾವಿರ ರೂ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ. ಇದು ರೈತರ ಪಾಲಿಗೆ ವರದಾನವಾಗಿದ್ದು ಈ ಕುರಿತು ಮುಖ್ಯಮಂತ್ರಿಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೇಂದ್ರವೂ ಸಾಲ ಮನ್ನಾ ಮಾಡಲಿ: ಪ್ರಭಾಕರ ಪ್ರಭು"
Be the first to comment on "ಕೇಂದ್ರವೂ ಸಾಲ ಮನ್ನಾ ಮಾಡಲಿ: ಪ್ರಭಾಕರ ಪ್ರಭು"