ವಿದ್ಯುತ್ ತಂತಿ ಸ್ಪರ್ಶಿಸಿ ಬಡಗಬೆಳ್ಳೂರು ಸೈಟ್ ಮನೆ ನಿವಾಸಿ ಯೋಗೇಶ ಪೂಜಾರಿ (38) ಸಾವನ್ನಪ್ಪಿದ್ದಾರೆ.
ಗುರುವಾರ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮಾಯಿಲಕೋಡಿ ಎಂಬಲ್ಲಿ ಘಟನೆ ನಡೆದಿದೆ.
ಮನೆಯೊಂದರಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಅವರು, ಸಂಜೆಯ ವೇಳೆಗೆ ದನವನ್ನು ತರಲೆಂದು ತೋಟಕ್ಕೆ ತೆರಳಿದ್ದ ಸಂದರ್ಭ ತುಕ್ಕು ಹಿಡಿದು ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿವಾಹಿತರಾಗಿರುವ ಯೋಗೇಶ್ ಅವರಿಗೆ ನಾಲ್ಕು ಮಕ್ಕಳಿದ್ದು, ಅವರ ಅಕಾಲಿಕ ಮರಣದಿಂದ ಕುಟುಂಬ ಕಂಗಾಲಾಗಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…