ಅಂತಾರಾಷ್ಟೀಯ ಲಯನ್ಸ್ ಸಂಸ್ಥೆ ಜಿಲ್ಲೆ 317ಡಿ ಲಯನ್ಸ್ ಕ್ಲಬ್ ಬಂಟ್ವಾಳದ ಪದಗ್ರಹಣ ಸಮಾರಂಭ ಜುಲೈ 2 ಭಾನುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಸಂಜೆ 6.30 ಕ್ಕೆ ನಡೆಯಲಿದೆ.
ಜಾಹೀರಾತು
2017-18 ರ ನೂತನ ಅಧ್ಯಕ್ಷರಾಗಿ ಜಗದೀಶ ಎಡಪಡಿತ್ತಾಯ ಕಾರ್ಯದರ್ಶಿಯಾಗಿ ರಾಮಕೃಷ್ಣ ರಾವ್. ಬಿ ಕೋಶಾಧಿಕಾರಿಯಾಗಿ ರೋಹಿತಾಶ್ವ.ಎಂ ಮತ್ತು ಲಯನೆಸ್ ಕ್ಲಬ್ ಅಧ್ಯಕ್ಷೆಯಾಗಿ ಚಿತ್ರಾ ಎಡಪಡಿತ್ತಾಯ ಕಾರ್ಯದರ್ಶಿಯಾಗಿ ಸುಜಾತ ರವಿಶಂಕರ್ ಹಾಗೂ ಕೋಶಾಧಿಕಾರಿಯಾಗಿ ವಸಂತಿ ಲೋಕನಾಥ ಶೆಟ್ಟಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಅಧಿಕಾರಿಯಾಗಿ ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತಕೃಷ್ಣ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜುಲೈ 2ಕ್ಕೆ ಲಯನ್ಸ್ ಪದಗ್ರಹಣ ಸಮಾರಂಭ"
Be the first to comment on "ಜುಲೈ 2ಕ್ಕೆ ಲಯನ್ಸ್ ಪದಗ್ರಹಣ ಸಮಾರಂಭ"