ಬಂಟ್ವಾಳ ತಾಲೂಕು ಮಟ್ಟದ ಜನಸಂಪರ್ಕ ಸಭೆ 15ರಂದು ಬೆಳಗ್ಗೆ 10.30 ಕ್ಕೆ ಲೊರೆಟ್ಟೋ ಮಾತಾ ಚರ್ಚ್ ಸಭಾಭವನಲ್ಲಿ ನಡೆಯಲಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಸ್ಥಾಪಿಸಲಾದ ವಿಶೇಷ ಕೌಂಟರ್ ನಲ್ಲಿ ಸಲ್ಲಿಸಬಹುದು ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.