ಸಾರ್ವಜನಿಕರ ಸೇವೆಯನ್ನು ಮತ್ತಷ್ಟು ತ್ವರಿತವಾಗಿ ಕೈಗೊಳ್ಳಲು ಬಂಟ್ವಾಳ ತಾಲೂಕು ಕಚೇರಿಗೆ ಹೊಸ ಬೊಲೆರೊ ವಾಹನ ಬಂದಿದೆ. ತಾಲೂಕು ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ದಂಡಾಧಿಕಾರಿ ಪುರಂದರ ಹೆಗ್ಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ವಾಹನದ ಕೀಲಿಕೈ ಹಸ್ತಾಂತರಿಸಿದರು.
ಈ ಸಂದರ್ಭ ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಪದ್ಮಶೇಖರ ಜೈನ್, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪ್ರಮುಖರಾದ ಮಾಧವ ಮಾವೆ, ಜನಾರ್ದನ ಚಂಡ್ತಿಮಾರ್ ಮತ್ತಿತರರು ಹಾಜರಿದ್ದರು.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…