ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜು ನೂತನ ಕಟ್ಟಡ ಉದ್ಘಾಟನೆ, ಪ್ರೌಢ ಶಾಲಾ ವಿಭಾಗದ ಉಚಿತ ಸೈಕಲ್ ವಿತರಣೆ, ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸೋಮವಾರ ಉದ್ಘಾಟಿಸಿ, ಮಾತನಾಡಿದರು.
ಉತ್ತಮ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪೂರಕ ವಾತಾವರಣ ನಿರ್ಮಾಣ ಮಾಡಲು ಶಿಕ್ಷಣ ಇಲಾಖೆ ಹೆಚ್ಚಿನ ಮುತುರ್ವಜಿ ವಹಿಸಬೇಕು ಎಂದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಗ್ರಾ.ಪಂ. ಅಧ್ಯಕ್ಷ ಗಣಪತಿ ಭಟ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ ಸದಸ್ಯ ಸಂಜೀವ ಪೂಜಾರಿ, ಜಿ.ಪಂ ಸದಸ್ಯ ಎಮ್.ಎಸ್ ಮಹಮ್ಮದ್, ಮಹಾಬಲ ರೈ, ಆರಾಧನಾ ಸಮಿತಿ ಸದಸ್ಯ ಯೂಸುಫ್ ಕರಂದಾಡಿ, ಬಿಇಓ ಲೋಕೇಶ್ ಸಿ, ಎಸ್‌ಡಿಎಮ್.ಸಿ ಸದಸ್ಯರಾದ ವಿಶ್ವನಾಥ ಬೆಳ್ಚಾಡ, ಪರಮೇಶ್ವರ ಮೂಲ್ಯ, ಪ್ರಭಾಕರ ಶೆಟ್ಟಿ, ಅಬ್ದುಲ್ ಅಜೀಝ್, ರಮೇಶ್ ಅನ್ನಪ್ಪಾಡಿ, ಚಂದು ನಾಯ್ಕ, ಹಾಗೂ ಶಾಲಾಭಿವೃದ್ದಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪ್ರಾಂಶುಪಾಲ ಬಾಬು ಗಾಂವಕರ್ ಸ್ವಾಗತಿಸಿದರು.