ಬಂಟ್ವಾಳ

ನಿಷೇಧಾಜ್ಞೆ ಜುಲೈ 11ರವರೆಗೆ ವಿಸ್ತರಣೆ

ಮುಂಜಾಗರೂಕತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗೆ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಸಂಬಂಧಿಸಿದಂತೆ ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 4 ರ ಮಧ್ಯರಾತ್ರಿ 12 ಗಂಟೆಯಿಂದ ಜುಲೈ 11 ರ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು  ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.

ಜಾಹೀರಾತು

ಜುಲೈ 11ರವರೆಗೂ ನಿಷೇಧಾಜ್ಞೆ ಮುಂದುವರಿದರೆ, ಬಂಟ್ವಾಳ ತಾಲೂಕಿನಲ್ಲಿ ನಿಷೇಧಾಜ್ಞೆ ವಿಧಿಸಿ 46 ದಿನಗಳು ತುಂಬಿಹೋಗುತ್ತವೆ.

ಮೇ.26ರಂದು ಕಲ್ಲಡ್ಕದಲ್ಲಿ ನಡೆದ ಅಹಿತಕರ ಘಟನೆ ಬಳಿಕ ಮೇ.27ರಂದು ತಾಲೂಕಿನಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿತ್ತು. ಇದೀಗ ವಾತಾವರಣ ತಿಳಿಯಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದೇ ಇದ್ದರೂ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಮೇ 27ರಿಂದ ಜೂನ್ 2, ಜೂನ್ 3ರಿಂದ ಜೂನ್ 9, ಜೂನ್ 10ರಿಂದ ಜೂನ್ 16, ಜೂನ್ 17ರಿಂದ ಜೂನ್ 23, ಜೂನ್ 23ರಿಂದ ಜೂನ್ 29ವರೆಗೆ ನಿಷೇಧಾಜ್ಞೆ ವಿಧಿಸಲಾಯಿತು. ಬಳಿಕ ಜುಲೈ 4ವರೆಗೆ ವಿಸ್ತರಣೆಗೊಂಡ ನಿಷೇಧಾಜ್ಞೆಯನ್ನೀಗ 7ನೇ ಬಾರಿ ವಿಸ್ತರಿಸಿದಂತಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts