ಬಿ.ಸಿ.ರೋಡ್ ನಲ್ಲಿ ಯುವಕನ ಇರಿದು ಪರಾರಿಯಾದ ದುಷ್ಕರ್ಮಿಗಳು

ಬಿ.ಸಿ.ರೋಡ್ ನಲ್ಲಿ ಮಂಗಳವಾರ ರಾತ್ರಿ ಉದಯ ಲಾಂಡ್ರಿಯ ಮಾಲೀಕರ ಮಗ ಸಜೀಪ ಕಂದೂರು ನಿವಾಸಿ ಶರತ್ ಎಂಬ ಯುವಕನ ಮೇಲೆ ಬೈಕ್ ನಲ್ಲಿ ಬಂದ ಆಗಂತುಕರು ಮಾರಕಾಸ್ತ್ರಗಳಿಂದ ಇರಿದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಹೆಚ್ಚಿನ ತನಿಖೆ ಸಾಗಿದೆ. ಆರೆಸ್ಸೆಸ್ ಕಾರ್ಯಕರ್ತರೂ ಆಗಿರುವ ಶರತ್ ಅಂಗಡಿ ಬಾಗಿಲು ಹಾಕುವ ವೇಳೆ ಕೃತ್ಯ ನಡೆದಿದೆ ಎನ್ನಲಾಗಿದ್ದು, ಘಟನೆ ನಡೆದ ಕೂಡಲೇ ಶರತ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ತೀವ್ರ ರಕ್ತಸ್ರಾವದಿಂದ ಪರಿಸ್ಥಿತಿ ಹದಗೆಟ್ಟ ಕಾರಣ, ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು.

ಘಟನೆ ಬಳಿಕ ಪರಿಸ್ಥಿತಿ ಮತ್ತೆ ಆತಂಕದಿಂದ ಕೂಡಿದೆ. ಬೆಂಗಳೂರು ಸಹಿತ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರು ಬಿ.ಸಿ.ರೋಡಿನಲ್ಲಿ ನಿಂತಿದ್ದ ಸಾರ್ವಜನಿಕರು ಘಟನೆ ಬಳಿಕ ಗಲಿಬಿಲಿಗೊಂಡರು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ಆಗಂತುಕರ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಯುತ್ತಿದ್ದು, ತನಿಖೆ ಸಾಗಿದೆ. ಹಲವಾರು ವಾಹನಗಳು ಸಂಚರಿಸುವ ಹಾಗೂ ಜನಸಂಚಾರ ಇರುವ ಈ ಜಾಗದಲ್ಲೇ ಮಾರಣಾಂತಿಕ ಹಲ್ಲೆಯನ್ನು ನಿರ್ಭೀತಿಯಿಂದ ದುಷ್ಕರ್ಮಿಗಳು ನಡೆಸಿದ್ದು, ಸಾರ್ವಜನಿಕರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ.

ಸಾರ್ವಜನಿಕರು ಘಟನೆ ಕುರಿತು ಊಹಾಪೋಹಗಳನ್ನಾಗಲೀ, ವದಂತಿಗಳನ್ನಾಗಲೀ ಹರಡಿಸಬೇಡಿ, ತನಿಖೆಗೆ ಸಹಕರಿಸಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.

 

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ.
  


  

  

Be the first to comment on "ಬಿ.ಸಿ.ರೋಡ್ ನಲ್ಲಿ ಯುವಕನ ಇರಿದು ಪರಾರಿಯಾದ ದುಷ್ಕರ್ಮಿಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*