ವಿಟ್ಲ

ಕರೋಪಾಡಿ ಗ್ರಾಪಂ ಉಪಚುನಾವಣೆ: ಅನ್ವರ್ ಗೆ ಜಯ

ಕರೋಪಾಡಿ ಗ್ರಾಮ ಪಂಚಾಯತಿಗೆ ಭಾನುವಾರ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎ.ಮಹಮ್ಮದ್ ಅನ್ವರ್ 449 ಮತಗಳನ್ನು ಗಳಿಸುವ ಮೂಲಕ ವಿಜಯಿಯಾಗಿದ್ದಾರೆ.

ಚುನಾವಣಾಧಿಕಾರಿ ಸುಧಾ ಜೋಷಿ ಅವರು ಪ್ರಮಾಣಪತ್ರವನ್ನು ವಿತರಿಸಿದರು. ಈ ಸಂದರ್ಭ ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು

ಅವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಹರೀಶ್ ಕೋಡ್ಲ 320 ಮತಗಳನ್ನು ಗಳಿಸಿದ್ದಾರೆ. 21 ಮತಗಳು ತಿರಸ್ಕೃತಗೊಂಡಿವೆ.

ಮತದಾನ ಕೇಂದ್ರದಲ್ಲಿ ಒಟ್ಟು 769 ಮತಗಳು ದಾಖಲಾಗಿದ್ದವು. ಅವುಗಳಲ್ಲಿ 21 ತಿರಸ್ಕೃತಗೊಂಡವು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. 517 ಪುರುಷ ಮತದಾರರ ಪೈಕಿ 400 ಹಾಗೂ 462 ಮಹಿಳಾ ಮತದಾರರ ಪೈಕಿ 390 ಮಂದಿ ಮತ ಚಲಾಯಿಸಿದ್ದರು.

ಜಾಹೀರಾತು

ಗ್ರಾಮ ಪಂಚಾಯತ್ ಉಪಾಧ್ಯಕ್ಷರೂ ಆಗಿದ್ದ ಸ್ಥಳೀಯ ಸದಸ್ಯ ಜಲೀಲ್ ಅವರ ಹತ್ಯೆ ಬಳಿಕ ಸ್ಥಾನ ತೆರವಾಗಿದ್ದು, ಅವರ ಸಹೋದರ ಅನ್ವರ್ ಸ್ಪರ್ಧಿಸಿದ್ದರು.

ತಹಶೀಲ್ದಾರ್ ಪುರಂದರ ಹೆಗ್ಡೆ ಮಾರ್ಗದರ್ಶನದಲ್ಲಿ ಉಪತಹಶೀಲ್ದಾರ್ ಪರಮೇಶ್ವರ ನಾಯ್ಕ್ ನೇತೃತ್ವದಲ್ಲಿ ಎಣಿಕೆ ಕಾರ್ಯ ನಡೆಯಿತು. ವಿಟ್ಲ ಎಸ್.ಐ. ನಾಗರಾಜ್ ನೇತೃತ್ವದಲ್ಲಿ ಬಂದೋಬಸ್ತ್ ಇತ್ತು.

ಜಾಹೀರಾತು

ಇನ್ನಷ್ಟು ವರದಿಗೆ:

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ