ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇಲ್ಲಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸರಕಾರದ ವಿವಿಧ ಇಲಾಖೆಗಳಿಂದ ಕೊಡಮಾಡಲಾಗುವ ವಿದ್ಯಾರ್ಥಿವೇತನಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ನಿವೃತ್ತ ಶಿಕ್ಷಕ ನಾರಾಯಣ ನಾಯಕ್ ಕರ್ಪೆ ಇವರು ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ, ವಿದ್ಯಾಸಿರಿ, ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ, ಬೀಡಿ ಕಾರ್ಮಿಕರ ವಿದ್ಯಾರ್ಥಿವೇತನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ, ರಬ್ಬರ್ ಕಾರ್ಮಿಕರ ವಿದ್ಯಾರ್ಥಿವೇತನ, ಸಂಚಿಹೊನ್ನಮ್ಮ ಮತ್ತು ಸಿ.ವಿ.ರಾಮನ್ ವಿದ್ಯಾರ್ಥಿವೇತನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಸಾಲರೂಪದ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪ್ರೊ. ಹರಿಪ್ರಸಾದ್ ಬಿ. ಶೆಟ್ಟಿಯವರು ಕಾರ್ಯಕ್ರಮವನ್ನು ಸಂಯೋಜಿಸಿದರು.
Be the first to comment on "ವಿದ್ಯಾರ್ಥಿವೇತನ ಮಾಹಿತಿ ಕಾರ್ಯಕ್ರಮ"