ಬಂಟ್ವಾಳ

ನಂದರಬೆಟ್ಟು ಯುವಕ ಅಪಘಾತಕ್ಕೆ ಬಲಿ

ಕಲ್ಲಡ್ಕ ಸಮೀಪದ ಕೃಷ್ಣಕೋಡಿ ಎಂಬಲ್ಲಿ ಕ್ವಾಲೀಸ್ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಗುರುವಾರ ಬೆಳಗ್ಗೆ ಸಂಭವಿಸಿದ ಘಟನೆಯಲ್ಲಿ, ಬಿ.ಸಿ.ರೋಡ್ ಕೈಕಂಬದ ಪರ್ಲ್ಯ ನಂದರಬೆಟ್ಟು ನಿವಾಸಿ ರ ಮುಹಮ್ಮದ್ ಓವೈಸ್(20) ಮೃತಪಟ್ಟವರು.

ಜಾಹೀರಾತು

ಬಿ.ಸಿ.ರೋಡಿನಿಂದ ಮಾಣಿ ಕಡೆಗೆ ತೆರಳುತ್ತಿದ್ದ ಕ್ವಾಲಿಸ್ ಕಾರು ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆಯಿತು.

ದೊಡ್ಡಪ್ಪನ ಮಗನ ಮದುವೆಯ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ತುಂಬೆಯಲ್ಲೇ ಇದ್ದ ಅವರು, ಬೆಳಗ್ಗೆ ಚಿಕ್ಕಮ್ಮನ ಮಗನನ್ನು ಕಲ್ಲಡ್ಕದ ಮನೆಗೆ ಬಿಟ್ಟು ನಂದರಬೆಟ್ಟುವಿಗೆ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಾಹನಕ್ಕೆ ತಲೆ ಬಡಿದಿದ್ದರಿಂದ ಓವೈಸ್ ಅವರ ಮುಖ ಹಾಗೂ ತಲೆಭಾಗದಕ್ಕೆ ತೀವ್ರ ಸ್ವರೂಪದ ಗಾಯವಾಗಿತ್ತು.

ಇಸ್ಮಾಯೀಲ್ ಅವರ ನಾಲ್ಕು ಗಂಡು ಮಕ್ಕಳಲ್ಲಿ ಓವೈಸ್ ಕೊನೆಯವರು. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪರ್ಲ್ಯ ದಫನ ಭೂಮಿಯಲ್ಲಿ ಮಧ್ಯಾಹ್ನ ಮೂರು ಗಂಟೆಯ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಲಾಯಿತು. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಕೆ.ಸಿ.ರೋಡ್, ನರಹರಿ ಪರ್ವತ ಬಳಿ ಸಹಿತ ಕಲ್ಲಡ್ಕದ ಹಲವು ಭಾಗಗಳು ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದು, ಟ್ರಾಫಿಕ್ ನಿಯಮ ಉಲ್ಲಂಘಿಸಿ ತೆರಳುವ ಕೆಲ ವಾಹನಗಳಿಂದಾಗಿ ಅಪಾಯ, ಅಪಘಾತಗಳು ಸಂಭವಿಸುವಂತಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts