ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ನಡೆಯಿತು ಬೃಹತ್ ಪ್ರತಿಭಟನೆ

ಆರ್.ಎಸ್.ಎಸ್. ಕಾರ್ಯಕರ್ತ, ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲೀಕ ಶರತ್ ಮೇಲೆ ಮಂಗಳವಾರ ದುಷ್ಕರ್ಮಿಗಳು ನಡೆಸಿದ ದಾಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ ಎಂದು ಆರೋಪಿಸಿ ಹಿಂದು ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.

ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು

ಬೆಳಗ್ಗಿನಿಂದಲೇ ನೂರಾರು ಪೊಲೀಸರು ಹೆಜ್ಜೆಗೊಂದರಂತೆ ಬಿ.ಸಿ.ರೋಡ್ ಪೇಟೆಯಲ್ಲಿ ನಿಂತು ಕಾವಲು ಕಾದರು. ಸುಮಾರು 10.30ರ ಬಳಿಕ ಜಿಲ್ಲೆಯ ಹಲವೆಡೆಯಿಂದ ಸಂಘ ಪರಿವಾರ ಹಾಗೂ ಹಿಂದು ಸಂಘಟನೆಯ ಕಾರ್ಯಕರ್ತರು, ಬಿಜೆಪಿ ಮುಖಂಡರ ಸಹಿತ ನೂರಾರು ಮಂದಿ ಬಿ.ಸಿ.ರೋಡಿನ ಹಲವೆಡೆ ಸೇರಿದರು. ಸುಮಾರು 11ರ ವೇಳೆ ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ಜಮಾವಣೆಗೊಂಡರು. ಈ ಸಂದರ್ಭ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕರಾದ ಎಸ್.ಅಂಗಾರ, ಸುನೀಲ್ ಕುಮಾರ್, ಬಿಜೆಪಿ ಮತ್ತು ಸಂಘ ಪರಿವಾರ ಮುಖಂಡರಾದ ಪದ್ಮನಾಭ ಕೊಟ್ಟಾರಿ, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ನಾಗರಾಜ ಶೆಟ್ಟಿ, ಹರೀಶ್ ಪೂಂಜ, ರುಕ್ಮಯ ಪೂಜಾರಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂತೋಷ್ ರೈ ಬೋಳಿಯಾರು, ರಾಜಾರಾಮ ಭಟ್, ಮುರಳೀಕೃಷ್ಣ ಹಸಂತಡ್ಕ, ಸತ್ಯಜಿತ್ ಸುರತ್ಕಲ್, ರವಿರಾಜ್ ಬಿ.ಸಿ.ರೋಡ್, ದೇವದಾಸ ಶೆಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ಆರೆಸ್ಸೆಸ್ ಮುಖಂಡ ಪಿ.ಎಸ್. ಪ್ರಕಾಶ್, ಬಿಜೆಪಿ ರಾಜ್ಯ ವಕ್ತಾರೆ ಸುಲೋಚನಾ ಜಿ.ಕೆ. ಭಟ್ ಸಹಿತ ವಿವಿಧ ಮುಖಂಡರು ನೇತೃತ್ವ ವಹಿಸಿ, ರಾಜ್ಯ ಸರಕಾರ ಹಿಂದು ದಮನ ನೀತಿಯನ್ನು ಅನುಸರಿಸುತ್ತಿದ್ದು, ಶರತ್ ಹಲ್ಲೆ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮಾತನಾಡಿ, ಹಿಂದುಗಳನ್ನು ದಮನಿಸಲು ಯಾರಿಂದಲೂ ಸಾಧ್ಯವಿಲ್ಲ, ಸಂಘಟಿತವಾಗಿ ಸಮಾಜ ಹೋರಾಡುವ ಮೂಲಕ ತನ್ನ ಶಕ್ತಿಯನ್ನು ತೋರಿಸಿದೆ ಎಂದು ಹೇಳಿದರು.

ಕೆಲ ಹೊತ್ತು ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭ ಪೊಲೀಸರು ನಿಷೇಧಾಜ್ಞೆ ಕುರಿತು ಘೋಷಣೆ ಮೊಳಗಿಸಿದರು. ಐಜಿಪಿ ಹರಿಶೇಖರನ್, ಎಸ್ಪಿ ಸುಧೀರ್ ಕುಮಾರ್ ರೆಡ್ಡಿ, ಡಿವೈಎಸ್ಪಿ ರವೀಶ್ ಸಿ.ಆರ್, ಭಾಸ್ಕರ ರೈ, ಎಡಿಶನಲ್ ಎಸ್ಪಿ (ಪ್ರಭಾರ) ವಿಷ್ಣುವರ್ಧನ, ಸಿಐ ಮಂಜಯ್ಯ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದರುಗಳಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ಶಾಸಕರುಗಳಾದ ಎಸ್. ಅಂಗಾರ,ಸುನಿಲ್ ಕುಮಾರ್ ಕಾರ್ಕಳ, ಆರೆಸ್ಸೆಸ್ ಮುಖಂಡ ಪಿ.ಎಸ್. ಪ್ರಕಾಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ನಾಗರಾಜ ಶೆಟ್ಟಿ, ಮೋನಪ್ಪ ಭಂಡಾರಿ, ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ದೇವದಾಸ ಶೆಟ್ಟಿ, ಹರೀಶ್ ಪೂಂಜಾ, ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಶರಣ್ ಪಂಪ್‌ವೆಲ್, ಜಗದೀಶ ಶೇಣವ, ಸತ್ಯಜಿತ್ ಸುರತ್ಕಲ್, ರಂಜನ್ ಗೌಡ, ದಿನೇಶ್ ಅಮ್ಟೂರು, ಪುರುಷೋತ್ತಮ ಸಾಲಿಯಾನ್ ಶಂಭೂರು, ಜಗದೀಶ್ ಅಧಿಕಾರಿ, ಚಂದ್ರಹಾ ಉಚ್ಚಿಲ , ಜಿತೇಂದ್ರ ಕೊಟ್ಟಾರಿ, ಅರುಣ್ ಕುಮಾರ್ ಪುತ್ತಿಲ, ಮುರಳೀಕೃಷ್ಣ ಹಸಂತಡ್ಕ, ಸಂತೋಷ್ ಕುಮಾರ್ ಬೋಳಿಯಾರು, ರಾಜೇಶ್ ಬನ್ನೂರು, ರವಿರಾಜ್ ಬಿ.ಸಿ.ರೋಡು, ರಾಧಾಕೃಷ್ಣ ಅಡ್ಯಂತಾಯ, ಸರಪಾಡಿ ಅಶೋಕ್ ಶೆಟ್ಟಿ, ಗೋವಿಂದ ಪ್ರಭು, ದಿನೇಶ್ ಭಂಡಾರಿ,ತುಂಗಪ್ಪ ಬಂಗೇರ,ಕಮಲಾಕ್ಷಿ ಪೂಜಾರಿ,ಚೆನ್ನಪ್ಪ ಕೋಟ್ಯಾನ್,ರಮಾನಾಥ ರಾಯಿ,ವಜ್ರನಾಭ ಕಲ್ಲಡ್ಕ ಸೇರಿದಂತೆ ಸಾವಿರಕ್ಕೂ ಅಧಿಕಮಂದಿಯನ್ನು ಪೊಲೀಸರು  ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು.

ಜಾಹೀರಾತು

ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿ.ಸಿ. ರೋಡ್ ಪರಿಸರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿತ್ತು.

ವಿಡಿಯೋ ಲಿಂಕ್ ಗೆ ಕ್ಲಿಕ್ ಮಾಡಿ:

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ