ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಮಹತ್ವದ ಸುಳಿವು ಲಭ್ಯವಾಗಿದ್ದು, ಶೀಘ್ರದಲ್ಲೇ ಬಂಧಿಸುವ ವಿಶ್ವಾಸವನ್ನು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ.
ಬುಧವಾರ ಮಧ್ಯಾಹ್ನ ಬಂಟ್ವಾಳ ನಗರ ಠಾಣೆಗೆ ಆಗಮಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಹತ್ಯೆಗೆ ಸಂಬಂಧಿಸಿ ಸುಳ್ಯದಲ್ಲಿ ಆರೋಪಿಗಳು ಪತ್ತೆಯಾಗಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ, ಅವರು ಪ್ರತ್ಯೇಕ ಪ್ರಕರಣದ ಆರೋಪಿಗಳು. ಅವರ ವಿಚಾರಣೆಯನ್ನು ನಡೆಸಲಾಗುತ್ತಿದೆ, ಯಾರು ಹತ್ಯೆ ಮಾಡಿದ್ದಾರೋ ಅವರಿಗೆ ಶಿಕ್ಷೆ ಖಚಿತ, ಅವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಉಪ್ಪಿನಂಗಡಿಯಲ್ಲಿ ನಡೆದ ಘಟನೆ ದರೋಡೆ ಪ್ರಕರಣವಾಗಿದ್ದು, ಯಾವುದೇ ಕೋಮು ಘಟನೆಗೆ ಸಂಬಂಧಿಸಿದ್ದಲ್ಲ ಎಂದರು. ಇದಕ್ಕೂ ಮುನ್ನ ಶರತ್ ಹತ್ಯೆ ಘಟನೆ ನಡೆದ ಉದಯ ಲಾಂಡ್ರಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಐಜಿಪಿ ಹರಿಶೇಖರನ್, ಎಸ್ಪಿ ಸುರ್ ಕುಮಾರ್ ರೆಡ್ಡಿ, ಡಿವೈಎಸ್ಪಿ ರವೀಶ್ ಸಿ.ಆರ್ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಶರತ್ ಹತ್ಯೆ ಆರೋಪಿಗಳ ಸುಳಿವು ಲಭ್ಯ: ಎಡಿಜಿಪಿ ಅಲೋಕ್ ಮೋಹನ್"