ಜುಲೈ 4ರಂದು ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಹತ್ಯೆಗೊಳಗಾದ ಬಿ.ಸಿ.ರೋಡಿನ ಹೆದ್ದಾರಿ ಬದಿಯಲ್ಲಿರುವ ಉದಯ ಲಾಂಡ್ರಿ ಮಾಲೀಕ ಶರತ್ ಮಡಿವಾಳ ಅವರ ಕಂದೂರಿನಲ್ಲಿರುವ ಮನೆಗೆ ಮಂಗಳವಾರದಿಂದಲೇ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳ ಸಹಿತ ಹಲವು ರಾಜಕೀಯ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿದರು.
ಡಿ.ವಿ.ಸದಾನಂದ ಗೌಡ ಭೇಟಿ
ಮಂಗಳವಾರ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಶರತ್ ಮನೆಗೆ ಭೇಟಿ ನೀಡಿ ತನಿಯಪ್ಪ ಮಡಿವಾಳ ಅವರೊಂದಿಗೆ ಮಾತನಾಡಿದರು. ಈ ಸಂದರ್ಭ ರಾಜೇಶ್ ನಾಯ್ಕ್, ಸುನೀಲ್ ಕುಮಾರ್, ರುಕ್ಮಯ ಪೂಜಾರಿ ಸಹಿತ ಬಿಜೆಪಿಯ ಹಲವು ಮುಖಂಡರು ಜತೆಗಿದ್ದರು.
ರಮಾನಾಥ ರೈ ಭೇಟಿ
ಬುಧವಾರ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶರತ್ ಮನೆಗೆ ಭೇಟಿ ನೀಡಿದರು. ಈ ಸಂದರ್ಭ ಜಿಪಂ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ಜತೆಗಿದ್ದರು.
ಬಿ.ಎಸ್.ಯಡಿಯೂರಪ್ಪ ಭೇಟಿ
ಗುರುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದರು. ಈ ಸಂದರ್ಭ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಂಸದರಾದ ನಳಿನ್ ಕುಮಾರ್ ಕಟೀಲ್,ಶೋಭಾ ಕರಂದ್ಲಾಜೆ,ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು,ಮಾಜಿ ಶಾಸಕರಾದ ರುಕ್ಮಯ ಪೂಜಾರಿ,ಪದ್ಮನಾಭಕೊಟ್ಟಾರಿ,ಪ್ರಭಾಕರ ಬಂಗೇರ,ನಾಗರಾಜ ಶೆಟ್ಟಿ,ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ಸದಸ್ಯ ರವೀಂದ್ರಕಂಬಳಿ ,ಪಕ್ಷದ ಮುಖಂಡರಾದ ರಾಜೇಶ್ ನಾಯ್ಕ್ ಉಳಿಪಾಡಿ,ದೇವದಾಸ ಶೆಟ್ಟಿ, ದಿನೇಶ್ ಅಮ್ಟೂರು, ಬ್ರಿಜೇಷ್ ಚೌಟ, ಮೋನಪ್ಪ ದೇವಸ್ಯ, ರಾಮದಾಸ ಬಂಟ್ವಾಳ,ಚೆನ್ನಪ್ಪ ಕೋಟ್ಯಾನ್ ಹಾಗೂ ಸ್ಥಳೀಯ ಪ್ರಮುಖರು ಹಾಜರಿದ್ದರು
ಶಕುಂತಳಾ ಶೆಟ್ಟಿ ಭೇಟಿ
ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಶರತ್ ಮಡಿವಾಳ ಮನೆಗೆ ಗುರುವಾರ ಸಂಜೆ ಭೇಟಿ ನೀಡಿದರು.
ಭೇಟಿ ನೀಡಿದವರು:
ಮಂಗಳವಾರ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಶಾಸಕ ಸುನೀಲ್ ಕುಮಾರ್, ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರೆ, ಗುರುವಾರ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಭೇಟಿ ನೀಡಿ ಮನೆಯವರೊಂದಿಗೆ ಮಾತನಾಡಿ ಶರತ್ ತಂದೆ ತನಿಯಪ್ಪ ಮಡಿವಾಳ ಅವರಿಗೆ ಸಾಂತ್ವನ ಹೇಳಿದರು. ರಾಜಕಾರಣಿಗಳ ಭೇಟಿ ಸಂದರ್ಭ ಆಯಾ ಪಕ್ಷಗಳಿಗೆ ಸೇರಿದ ಜನಪ್ರತಿನಿಧಿಗಳು, ಪದಾಧಿಕಾರಿಗಳು ಜತೆಗಿದ್ದರು.
ಎಲ್ಲರ ಭೇಟಿ ವೇಳೆಯೂ ಶರತ್ ತಂದೆ ತನಿಯಪ್ಪ ಮಡಿವಾಳ ಕೇಳಿದ್ದೊಂದೇ… ನನ್ನ ಮಗನ ಹತ್ಯೆ ಆರೋಪಿಗಳನ್ನು ಬಂಧಿಸಿ ಶಿಕ್ಷೆಯಾಗುವಂತೆ ಮಾಡಿ.
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ತಂದೆ ತನಿಯಪ್ಪ ಮಡಿವಾಳ ಈಗ ಏಕಾಂಗಿ.
Be the first to comment on "ಶರತ್ ಮನೆಗೆ ರಾಜಕೀಯ ನಾಯಕರ ದಂಡು"