ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯನ್ನು ಬೆಂಗಳೂರಿನಿಂದ ಪ್ರಕಟಿಸಲಾಗಿದ್ದು, ಒಟ್ಟು 57 ಪ್ರಧಾನ ಕಾರ್ಯದರ್ಶಿ ಹಾಗೂ 96 ಮಂದಿಯನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರದೇಶವಾರು ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.
ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟಂತೆ ಕಾರ್ಯದರ್ಶಿಗಳಾಗಿ ಜಿಪಂ ಸದಸ್ಯೆ ಮಮತಾ ಗಟ್ಟಿ, ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ ರೈ, ಜಿಪಂ ಸದಸ್ಯ ಎಂ.ಎಸ್.ಮಹಮ್ಮದ್ ನೇಮಕಗೊಂಡ 96 ಮಂದಿಯಲ್ಲಿ ಇದ್ದಾರೆ.