ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿದ್ದ ಹನೀಫ್ ಬಗ್ಗುಮೂಲೆ ಅವರನ್ನು ನೇಮಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಹಾಜಿ ಎಚ್.ಎಂ. ಅಶ್ರಫ್ ಆದೇಶ ಹೊರಡಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಪಕ್ಷದ ಪ್ರಮುಖರಿಗೆ ವಿವಿಧ ಹುದ್ದೆಗಳನ್ನು ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಮಹೇಂದ್ರ ಜೋಶಿ ಅವರ ಸೂಚನೆ ಮೇರೆಗೆ ರಾಜ್ಯಾಧ್ಯಕ್ಷ ಭೀಮಾಶಂಕರ್ ವಿ.ಎಚ್. ಅವರ ನಿರ್ದೇಶನದಂತೆ ಹನೀಫ್ ಬಗ್ಗುಮೂಲೆ ಅವರನ್ನು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ನೇಮಿಸಿ ಜಿಲ್ಲಾ ಸೇವಾದಳ ಅಧ್ಯಕ್ಷ ಹಾಜಿ ಎಚ್.ಎಂ. ಅಶ್ರಫ್ ಈ ಆದೇಶ ಹೊರಡಿಸಿದ್ದಾರೆ.