ಬಂಟ್ವಾಳ

ನಿಷೇಧಾಜ್ಞೆ ಜುಲೈ 26ರವರೆಗೆ ಮುಂದುವರಿಕೆ

ಬಂಟ್ವಾಳ ತಾಲೂಕಿನ ಜನತೆ ಹಿಂದೆಂದು ಕಂಡು ಕೇಳರಿಯದಂಥ ಪರಿಸ್ಥಿತಿ ಈ ವರ್ಷ ನೋಡುತ್ತಿದ್ದಾರೆ. ಅದೇನೆಂದರೆ ಎರಡು ತಿಂಗಳು ಭರ್ತಿ ಸೆ.144ರನ್ವಯ ಪ್ರತಿಭಂದಕಾಜ್ಞೆಯಡಿ ಜೀವನ ಸಾಗಿಸುವುದು.

ಒಂದೆಡೆ ದುಷ್ಕರ್ಮಿಗಳ ಅಟ್ಟಹಾಸ, ಇನ್ನೊಂದೆಡೆ ಏನಾಗುತ್ತದೋ ಎಂಬ ಭೀತಿಯ ನಡುವೆ ಪೊಲೀಸರ ಪಡೆ ಕಾವಲು ಕಾಯುತ್ತಿದ್ದರೂ ಆಡಳಿತ ರಿಸ್ಕ್ ಬೇಡ ಎಂದು ಮುಂಜಾಗರೂಕತಾ ಕ್ರಮವಾಗಿ ನಿಷೇಧಾಜ್ಞೆ ವಿಸ್ತರಿಸಿದೆ.

ಮೇ 27ರಂದು ಜಾರಿಯಾದ ನಿಷೇಧಾಜ್ಞೆ ಕಾಲಕಾಲಕ್ಕೆ ವಿಸ್ತರಣೆ ಆಗುತ್ತಾ ಹೋಯಿತು. ಜುಲೈ 21ಕ್ಕೆ ಅದು ಕೊನೆಗೊಳ್ಳಬೇಕಿತ್ತು. ಆದರೆ ಮತ್ತೆ ಜುಲೈ 26 ರ ಬೆಳಿಗ್ಗೆ 9 ರವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಉಪವಿಭಾಗ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತ ಎ.ಸಿ. ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ತಾಲೂಕಿನಾದ್ಯಂತ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ, ಓಣಿ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.

ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸ್ಪೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೀಷ್ಠೆಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಚಿತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮಗಳನ್ನು ನಿಷೇಧಿಸಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ