ಬಂಟ್ವಾಳ ತಾಲೂಕಿನಾದ್ಯಂತ ಜುಲೈ 26 ರ ಬೆಳಿಗ್ಗೆ 9 ಗಂಟೆಯಿಂದ ಜುಲೈ 28 ಮಧ್ಯರಾತ್ರಿ 12 ಗಂಟೆವರೆಗೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35ರ ಅನ್ವಯ ನಿರ್ಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ತಾಲೂಕಿನಾದ್ಯಂತ ಮೇಲೆ ತಿಳಿಸಿದ ಅವಧಿಯಲ್ಲಿ ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಹಾಗೂ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ, ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟುಮಾಡುವ ಘೋಷಣೆ ಹಾಗೂ ಭಾಷಣ ಮಾಡುವುದು, ಭಿತ್ತಿಪತ್ರಗಳನ್ನು ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದು, ಬಹಿರಂಗ ಸಭೆ, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.
ನಿಷೇಧಾಜ್ಞೆ ಜುಲೈ 26ರವರೆಗೆ ಮುಂದುವರಿಕೆ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಜುಲೈ 28ವರೆಗೆ ನಿರ್ಬಂಧಕಾಜ್ಞೆ"