ಸಂಘಟನೆಗಳು ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು ಬರುತ್ತದೆ. ತಮಗೆ ಸಿಗುವ ಅವಕಾಶವನ್ನು ಯೋಗ್ಯ ರೀತಿಯಲ್ಲಿ ನಿರ್ವಹಿಸಿದಾಗ ಮಾತ್ರ ಸಂಘಟನೆಗೂ ಸಮಾಜಕ್ಕೂ ಕೀರ್ತಿ ಲಭ್ಯವಾಗುತ್ತದೆ. ನಾಯಕತ್ವ ವಹಿಸುವುದು ಜವಾಬ್ದಾರಿ ಯ ಕೆಲಸ. ನಾಯಕನಾದವನು ತನ್ನ ಬಳಗವನ್ನು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶ್ರೀ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು.
ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ೨೦೧೭-೧೮ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಬದುಕು ಕ್ರಿಯಾಶೀಲವಾಗಿರಬೇಕು , ಸ್ವಯಂಪ್ರೇರಿತ ಸೇವಾ ಮನೋಭಾವ ಹೊಂದಿರಬೇಕು ,ಧರ್ಮ ಸಂಸ್ಕತಿ ಬದುಕನ್ನು ರೂಪಿಸುತ್ತದೆ, ಬಡವರಿಗೆ ಮನೆ ನಿರ್ಮಾಣ ಮಾಡಿದ ಯುವವಾಹಿನಿಯ ಸೇವಾ ಕಾರ್ಯ ಶ್ಲಾಘನೀಯ ಎಂದು ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಜಗದೀಪ್ ಡಿ.ಸುವರ್ಣ ತಿಳಿಸಿದರು.
ಬಂಟ್ವಾಳ ಜೆಸಿಐ ಮಾಜಿ ಅಧ್ಯಕ್ಷರಾದ ಲೋಕೇಶ್ ಸುವರ್ಣ, ಪುರೋಹಿತರಾದ ಕೇಶವ ಶಾಂತಿ ನಾಟಿ, ಬಿರುವೆರ್ ಕುಡ್ಲದ ಅಧ್ಯಕ್ಷರಾದ ರಾಕೇಶ್ ಪೂಜಾರಿ, ಸಂಸ್ಥಾಪಕರಾದ ಅಭಿಶೇಕ್ ಅಮೀನ್, ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಕೆ ಮಾಡಿದರು.ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಯುವವಾಹಿನಿ ಮಾಜಿ ಅಧ್ಯಕ್ಷರಾದ ರಾಜೇಶ್ ಸುವರ್ಣ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು.ನೂತನ ಅಧ್ಯಕ್ಷರಾದ ಲೋಕೇಶ್ ಸುವರ್ಣ ಅಲೆತ್ತೂರು ಎಲ್ಲರ ಸಲಹೆ ಸೂಚನೆ ಮಾರ್ಗದರ್ಶನ ಪಡೆದು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವುದಾಗಿ ತಿಳಿಸಿದರು.ಆಟಿ ತಿಂಗಳ ವೈವಿಧ್ಯಮಯ ತಿಂಡಿ ತಿನಿಸುಗಳ ಊಟೋಪಚಾರ ಎಲ್ಲರ ಮನಸೂರೆಗೊಂಡಿತು. ಕೋಶಾಧಿಕಾರಿ ಸತೀಶ್ ಪೂಜಾರಿ ಬಾಯಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಚಾಲಕರಾದ ಹರೀಶ್ ಕೋಟ್ಯಾನ್ ಕುದನೆ ಸ್ವಾಗತಿಸಿದರು, ನೂತನ ಉಪಾಧ್ಯಕ್ಷ ಗಣೇಶ್ ಪೂಂಜರೆಕೋಡಿ ಪ್ರಾಸ್ತಾವಿಕ ಮಾತನಾಡಿದರು, ನೂತನ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಹಾಗೂ ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು
Be the first to comment on "ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಪದಗ್ರಹಣ"