ಪುತ್ತೂರು ಸುದಾನ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ ಮೂರು ತಾಲೂಕುಗಳ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬಾಲಕಿಯರ ೧೩ ಮತ್ತು ೧೫ ವರ್ಷದ ವಿಭಾಗದಲ್ಲಿ ವಿಟ್ಲ ಬಸವನಗುಡಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ಸ್ಫೂರ್ತಿ ರೈ ಪ್ರಥಮ ಸ್ಥಾನ ಪಡೆದರು. ಮತ್ತು ೧೮ ವರ್ಷ ಹಾಗೂ ಮಹಿಳೆಯರ ವಿಭಾಗದಲ್ಲಿಯೂ ಸ್ಪರ್ಧಿಸಿ ದ್ವಿತೀಯ ಬಹುಮಾನ ಪಡೆದರು. ಈಕೆ ಇತ್ತೀಚೆಗೆ ಕರ್ನಾಟಕ ರಾಜ್ಯ ಜಾನ್ಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಕಾಡೆಮಿಯು ಕಾರ್ಕಳದಲ್ಲಿ ಆಯೋಜಿಸಿದ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಬಾಲಕಿಯರ ೧೩ ವರ್ಷದ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)