ಬಂಟ್ವಾಳ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬಿ.ಸಿ.ರೋಡ್ ಕೈಕುಂಜೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲಿ ಆಗಸ್ಟ್ 15ರಂದು ನಡೆಯಲಿದೆ.
ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕರೂ ಆದ ಅರಣ್ಯ ಸಚಿವ ಬಿ.ರಮಾನಾಥ ರೈ ವಹಿಸುವರು. ಮುಖ್ಯ ಅತಿಥಿಗಳಾಗಿ ಆಹಾರ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಶಕುಂತಳಾ ಶೆಟ್ಟಿ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿ.ಸದಾಶಿವ ಬಂಗೇರ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಭಾಗವಹಿಸುವರು.
ಈ ಸಂದರ್ಭ ಪ್ರಧಾನ ಭಾಷಣಕಾರರಾಗಿ ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನ ಸಹಪ್ರಾಧ್ಯಾಪಕಿ ಡಾ. ನಾಗವೇಣಿ ಮಂಚಿ ಭಾಗವಹಿಸುವರು.
ಬೆಳಗ್ಗೆ ೮.೪೫ಕ್ಕೆ ಪೊಲೀಸ್, ಗೃಹರಕ್ಷಕ ದಳ, ಎನ್.ಸಿಸಿ, ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಕಬ್, ಗೈಡ್ಸ್, ಬುಲ್ ಬುಲ್ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯೋತ್ಸವ ಮೆರವಣಿಗೆ ನಡೆಯಲಿದೆ. ಬಳಿಕ ೯ ಗಂಟೆಗೆ ಮಿನಿ ವಿಧಾನಸೌಧ ಕಟ್ಟಡದ ಎದುರು ಬಂಟ್ವಾಳ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಪುರಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸುವರು. ಬಳಿಕ ವಿವಿಧ ತುಕಡಿಗಳಿಂದ ಪಥಸಂಚಲನ ನಡೆಯಲಿದೆ. ಬೆಳಗ್ಗೆ ೯.೩೦ರಿಂದ ಸಭಾ ಕಾರ್ಯಕ್ರಮ ಮತ್ತು ೧೧ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಕೈಕುಂಜೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…