ದೇಶದಾದ್ಯಂತ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಲ್ಲೆ ಕೊಲೆಗಳನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಕೆಲವು ಧಾರ್ಮಿಕ ಕೇಂದ್ರಗಳಲ್ಲಿ ಭಿತ್ತಿ ಚಿತ್ರ ಪ್ರದರ್ಶಿಸುವ ಮೂಲಕ ಕ್ಯಾಂಪಸ್ ಫ್ರಂಟ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ದೇಶದಲ್ಲಿ ನಡೆಯುತ್ತಿರುವಂತಹ ಅಲ್ಪಸಂಖ್ಯಾತರ ಮೇಲಿನ ಸಾಮೂಹಿಕ ಹತ್ಯೆಯ ಕುರಿತು ಪ್ರಹಸನದ ರೂಪದಲ್ಲಿ ವಿಭಿನ್ನವಾಗಿ ಜನತೆಗೆ ಜಾಗೃತಿ ಮೂಡಿಸಲಾಯಿತು ಎಂದು ಮಾಧ್ಯಮ ಸಂಯೋಜಕ ಫಹದ್ ಅನ್ವರ್ ತಿಳಿಸಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…