ದ.ಕ. ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಸಹಯೋಗದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ, ಗುರುತಿಸುವಿಕೆ ಶಿಬಿರ 9ರಂದು ಬೆಳಗ್ಗೆ 10ರಿಂದ 1ವರೆಗೆ ನಡೆಯಲಿದೆ. ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯುವ ಈ ಶಿಬಿರದಲ್ಲಿ ಸಂತ್ರಸ್ತರು ಪಾಲ್ಗೊಂಡು ತಪಾಸಣೆಗೊಳಪಟ್ಟು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.