ಪ್ರಯಾಣಿಕರನ್ನು ಹತ್ತಿಸಲು ಹಾಗೂ ಇಳಿಸಲು ನಿಗದಿತ ಬಸ್‍ತಂಗುದಾಣಗಳಲ್ಲಿಯೇ ಬಸ್ಸುಗಳನ್ನು ನಿಲ್ಲಿಸಬೇಕಿದೆ. ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು ಮಾಡಬಾರದು. ಈ ರೀತಿ ಮಾಡುವುದರಿಂದ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ ಹಾಗೂ ಅಪಘಾತಗಳು ನಡೆಯುವ ಸಂಭವವಿರುತ್ತದೆ. ರಸ್ತೆ ಮಧ್ಯದಲ್ಲಿ ನಿಲುಗಡೆಗೊಳಿಸುವುದು ಕಂಡುಬಂದಲ್ಲಿ ಬಸ್ಸು ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು.
ಬಸ್ಸಿನ ಚಾಲಕ/ನಿರ್ವಾಹಕರು ಸಮವಸ್ತ್ರವನ್ನು ತಪ್ಪದೇ ಧರಿಸಬೇಕು. ಸುರಕ್ಷತಾ ದೃಷ್ಟಿಯಿಂದ ಪ್ರಯಾಣಿಕರು ಬಸ್ಸು ಬೇ/ ತಂಗುದಾಣದಲ್ಲಿಯೇ ಬಸ್ಸನ್ನು ಹತ್ತಬೇಕು ಹಾಗೂ ಇಳಿಯಬೇಕು. ಯಾವುದೇ ಕಾರಣಕ್ಕೂ ಚಲಿಸುತ್ತಿರುವ ಬಸ್ಸನ್ನು ಹತ್ತುವುದು ಅಥವಾ ಇಳಿಯುವುದು ಮಾಡಬಾರದಾಗಿ ಆರ್‍ಟಿಓ ಪ್ರಕಟಣೆ ತಿಳಿಸಿದೆ.
Be the first to comment on "ಸಿಕ್ಕಸಿಕ್ಕಲ್ಲಿ ಬಸ್ ನಿಲ್ಸಿದ್ರೆ ಲೈಸನ್ಸ್ ರದ್ದು – ಆರ್.ಟಿ.ಓ."