ಗುಜರಾತ್‌ನಲ್ಲಿ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಹಮದ್ ಪಟೇಲ್ ಗೆಲುವಿನ ಹಿನ್ನಲೆಯಲ್ಲಿ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಸಂಭ್ರಮಾಚರಣೆ ಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಈ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ಮೂಲನ ಮಾಡಲು ಹೊರಟಿದ್ದಾರೆ. ಆದರೆ ಅದಕ್ಕೆ ಜನ ಬೆಂಬಲ ಇಲ್ಲ ಅನ್ನೋದು ಗುಜರಾತಿನ ರಾಜ್ಯಸಭಾ ಚುನಾವಣೆಯ ಫಲಿತಾಂಶದಿಂದ ಸಾಬೀತಾಗಿದೆ ಎಂದರು.
ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಬೂಡ ಅಧ್ಯಕ್ಷ ಸದಾಶಿವ ಬಂಗೇರ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪುರಸಭಾ ಸದಸ್ಯ ಗಂಗಾಧರ್, ತಾ.ಪಂ.ಸದಸ್ಯರಾದ ಪ್ರಭಾಕರ ಪ್ರಭು, ಸಂಜೀವ ಪೂಜಾರಿ, ಶಿವಪ್ರಸಾದ್, ಮಲ್ಲಿಕಾ ವಿ.ಶೆಟ್ಟಿ, ಗಾಯತ್ರಿ, ಪದ್ಮಶ್ರೀ, ಪ್ರಮುಖರಾದ ರಝಾಕ್ ಇರಾ, ಜನಾರ್ದನ ಚೆಂಡ್ತಿಮಾರ್, ರಮೇಶ್ ಕುಲಾಲ್, ಮಹಮ್ಮದ್ ನಂದಾವರ, ಸಂಜಿತ್ ಮತ್ತಿತತರರು ಹಾಜರಿದ್ದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)