ಬಂಟ್ವಾಳ

ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

ರಾಜ್ಯ ಸಭಾ ಸ್ಥಾನಕ್ಕಾಗಿ ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬಿಜೆಪಿ ಬುಡಮೇಲು ಮಾಡಿದೆ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ ಆರೋಪಿಸಿದರು.
ಗುಜರಾತ್‌ನಲ್ಲಿ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಹಮದ್ ಪಟೇಲ್ ಗೆಲುವಿನ ಹಿನ್ನಲೆಯಲ್ಲಿ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಸಂಭ್ರಮಾಚರಣೆ ಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಈ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ಮೂಲನ ಮಾಡಲು ಹೊರಟಿದ್ದಾರೆ. ಆದರೆ ಅದಕ್ಕೆ ಜನ ಬೆಂಬಲ ಇಲ್ಲ ಅನ್ನೋದು ಗುಜರಾತಿನ ರಾಜ್ಯಸಭಾ ಚುನಾವಣೆಯ ಫಲಿತಾಂಶದಿಂದ ಸಾಬೀತಾಗಿದೆ ಎಂದರು.
ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಬೂಡ ಅಧ್ಯಕ್ಷ ಸದಾಶಿವ ಬಂಗೇರ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪುರಸಭಾ ಸದಸ್ಯ ಗಂಗಾಧರ್, ತಾ.ಪಂ.ಸದಸ್ಯರಾದ ಪ್ರಭಾಕರ ಪ್ರಭು, ಸಂಜೀವ ಪೂಜಾರಿ, ಶಿವಪ್ರಸಾದ್, ಮಲ್ಲಿಕಾ ವಿ.ಶೆಟ್ಟಿ, ಗಾಯತ್ರಿ, ಪದ್ಮಶ್ರೀ, ಪ್ರಮುಖರಾದ ರಝಾಕ್ ಇರಾ, ಜನಾರ್ದನ ಚೆಂಡ್ತಿಮಾರ್, ರಮೇಶ್ ಕುಲಾಲ್, ಮಹಮ್ಮದ್ ನಂದಾವರ, ಸಂಜಿತ್ ಮತ್ತಿತತರರು ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ