ಬಂಟ್ವಾಳ ಎಸ್.ವಿ.ಎಸ್. ದೇವಳ ಕ್ರೀಡಾಂಗಣದಲ್ಲಿ ಶನಿವಾರ ಆ.19ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬಂಟ್ವಾಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವಜನ ಒಕ್ಕೂಟ ಬಂಟ್ವಾಳ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆ ಆಶ್ರಯದಲ್ಲಿ ಕಾರ್ಯಕ್ರಮ ನಡೆಯುವುದು ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ನವೀನ್ ಪಿ.ಎಸ್ ಹಾಗೂ ತಾಪಂ ಇಒ ಸಿಪ್ರಿಯನ್ ಮಿರಾಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 10ಕ್ಕೆ ಕಾರ್ಯಕ್ರಮವನ್ನು ಸಚಿವ ಯು.ಟಿ.ಖಾದರ್ ಉದ್ಘಾಟಿಸುವರು.
ಅಧ್ಯಕ್ಷತೆಯನ್ನು ಸಚಿವ ಬಿ.ರಮಾನಾಥ ರೈ ವಹಿಸುವರು. ಈ ಸಂದರ್ಭ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕಿ ಶಕುಂತಳಾ ಶೆಟ್ಟಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಯುವಜನ ಒಕ್ಕೂಟ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ, ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆ ಸಂಚಾಲಕ ಪುರುಷೋತ್ತಮ ಶೆನೈ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರತ್ನಾವತಿ ಎ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ಅಧ್ಯಾಪಕರ ಸಹಕಾರಿ ಸೇವಾ ಸಂಘ ಅಧ್ಯಕ್ಷ ರಮೇಶ್ ನಾಯಕ್ ರಾಯಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಬಾಳ್ತಿಲ ಉಪಸ್ಥಿತರಿರುವರು.
ಈ ಸಂದರ್ಭ ಪುರುಷರಿಗೆ ಮತ್ತು ಮಹಿಳೆಯರಿಗೆ ಕಬಡ್ಡಿ, ಖೋಖೋ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ತ್ರೋಬಾಲ್, ೧೦೦ ಮೀ, ೨೦೦ ಮೀ, ೪೦೦ ಮೀ, ೮೦೦ ಮೀ, ೧೫೦೦ ಮೀ ಓಟ, ಶಾಟ್‌ಪುಟ್, ಉದ್ದ ಜಿಗಿತ, ಎತ್ತರ ಜಿಗಿತ, ಜ್ಯಾವೆಲಿನ್ ಎಸೆತ, ಡಿಸ್ಕಸ್ ಎಸೆತ, ಟ್ರಿಪಲ್ ಜಂಪ್, ೧೦೦ ಮೀ, ಹರ್ಡಲ್ಸ್ ಮತ್ತು ರಿಲೇ, ಪುರುಷರಿಗೆ ೫೦೦೦ ಮೀ ಓಟ, ಮಹಿಳೆಯರಿಗೆ ೩೦೦೦ ಮೀ ಓಟ ನಡೆಯಲಿದೆ.
ದಸರಾ ಕ್ರೀಡಾಕೂಟದ ಶಟಲ್ ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್, ಹ್ಯಾಂಡ್‌ಬಾಲ್, ಹಾಕಿ, ಈಜು, ಟೆನ್ನಿಸ್, ವೈಟ್‌ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದಲ್ಲಿ ನೇರವಾಗಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Be the first to comment on "19ರಂದು ಎಸ್.ವಿ.ಎಸ್. ದೇವಳ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ"