ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಬಂಟ್ವಾಳದಲ್ಲಿರುವ ಲೋಕೋಪಯೋಗಿ, ಬಂದರು, ಒಳನಾಡು ಜಲಸಾರಿಗೆ ಇಲಾಖೆ ಉಪವಿಭಾಗದ ಕಚೇರಿ ಕಟ್ಟಡಕ್ಕೆ ಶುಕ್ರವಾರ ಸಂಜೆ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ೨೦೧೬-೧೭ ರ ಸಾಲಿನ ಇಲಾಖಾ ಕಟ್ಟಡಗಳು ಯೋಜನೆಯಡಿ ೧.೨ ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಲೋಕೋಪಯೋಗಿ ಇಲಾಖೆ ಉಪವಿಭಾಗದ ನೂತನ ಕಚೇರಿ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದರು.
ಗೇರು ಅಭಿವೃದ್ದಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಜಿ.ಪಂ. ಸದಸ್ಯರಾದ ಪದ್ಮಶೇಖರ ಜೈನ್, ಎಂ.ಎಸ್. ಮಹಮ್ಮದ್, ಮಂಜುಳಾ ಮಾಧವ ಮಾವೆ, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಾಜಿ ತಾಪಂ.ಸದಸ್ಯರಾದ ಮಾಧವ ಮಾವೆ, ಐಡಾ ಸುರೇಶ್, ಮಂಗಳೂರು ವೃತ್ತ ಲೋಕೋಪಯೋಗಿ ಅಧೀಕ್ಷಕ ಇಂಜಿನಿಯರ್ ಕಾಂತರಾಜ್.ಬಿ.ಟಿ. , ಕಾರ್ಯಕಾರಿ ಇಂಜಿನಿಯರ್ ಗಣೇಶ್ ಅರಳಿಕಟ್ಟೆ, ಸಹಾಯಕ ಕಾರ್ಯಕಾರಿ ಇಂಜಿನಿಯರ್ ಉಮೇಶ್ ಭಟ್, ಇಂಜಿನಿಯರುಗಳಾದ ಅಮೃತ್ ಕುಮಾರ್, ಪ್ರೀತಂ, ಗೋಪಾಲ್, ಅರುಣ್ ಪ್ರಕಾಶ್, ಗುತ್ತಿಗೆದಾರ ಎಸ್. ಪ್ರೇಮ್‌ನಾಥ್, ಪ್ರಮುಖರಾದ ಎಸ್.ಪಿ.ದಿನೇಶ್, ಖಾಸಿಂ, ಉಮಾನಾಥ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.