ನಾವು ಪಡೆಯುವ ಶಿಕ್ಷಣ ದೇಶದ ಅಭಿವೃದ್ಧಿಗೆ ಪೂರಕವಾಗಿರಲಿ ಎಂದು ವಿಧಾನಪರಿಷತ್ತಿನ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದರು.
ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಾಧಿಸುವ ಛಲ, ಉತ್ತಮ ಶಿಕ್ಷಣ ದೊರಕಿದರೆ ದೇಶದ ಯಾವ ಮೂಲೆಯಲ್ಲೂ ಸಾಧನೆ ಮಾಡಲು ಸಾಧ್ಯ ಎಂದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ರಾಜ್ಯ ಮಕ್ಕಳ ಹಕ್ಕು ಮತ್ತು ರಕ್ಷಣಾ ಆಯೋಗ ಅಧ್ಯಕ್ಷೆ ಕೃಪಾ ಅಮರ್ ಆಳ್ವ, ಮುಡಿಪು ಸರಕಾರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಎಸ್. ಗಿರಿಧರ್ ರಾವ್ ಮಾತನಾಡಿ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.
ಜ ಮಾತೆ ಇಸ್ಲಾಮಿ ಹಿಂದ್ ಕರ್ನಾಟಕ ಸಲಹಾ ಸಮಿತಿ ಸದಸ್ಯ ಅಕ್ಬರ್ ಆಲಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ಸಮಾಜಕ್ಕೆ ಪ್ರೀತಿ, ಭಾತೃತ್ವ ಪ್ರೇಮ ಹರಡಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ದ್ವಿತೀಯ ಬ್ಯಾಚ್ ವಿದ್ಯಾರ್ಥಿನಿಯರಿಗೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆಡಳಿತ ಮಂಡಳಿ ವತಿಯಿಂಧ ಐವನ್ ಡಿಸೋಜ ಮತ್ತು ಪ್ರಾಂಶುಪಾಲರಾದ ಜ್ಯೋತಿ ರತ್ನ ರೆಜಿನಾಲ್ ಅವರನ್ನು ಗೌರವಿಸಲಾಯಿತು.
ಕರ್ನಾಟಕ ಸರಕಾರದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ. ಮಹಮ್ಮದ್ ಮುಸ್ತಕ್, ಹವ್ವಾ ಜುಮಾ ಮಸೀದಿಯ ಖತೀಬ ಮೌಲಾನ ಯಾಹ್ಯಾ ತಂಞಳ್ ಮದನಿ, ಉದ್ಯಮಿ ಪಿ.ಬಿ.ಇಬ್ರಾಹಿಂ, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಯಾಸೀನ್ ಬೇಗ್, ಪ್ರೊ. ಅಬ್ದುಲ್ ರೆಹಮಾನ್ ಬೇಗ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಐಡಾ ಸುರೇಶ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಝಕಾರಿಯಾ ಕಲ್ಲಡ್ಕ, ಕಾರ್ಯದರ್ಶಿ ಮಿತ್ರದಾಸ್ ರೈ, ವಿದ್ಯಾರ್ಥಿ ಸಂಘ ಅಧ್ಯಕ್ಷೆ ಫೌಜಿಯಾ, ಆಯಿಷತ್ ಸುನೈನಾ ಮತ್ತಿತರರು ಉಪಸ್ಥಿತರಿದ್ದರು.
ಫಾತಿಮತ್ ಆಜ್ಮಿಯಾ ಸ್ವಾಗತಿಸಿದರು. ಸಫಾ ವಂದಿಸಿದರು. ನುಫೈಜು ಬಾನು ಮತ್ತು ಅಮ್ರೀನಾ ಕಾರ್ಯಕ್ರಮ ನಿರೂಪಿಸಿದರು.