ಆಗಸ್ಟ್ 14 ರಿಂದ 20 ರತನಕ ದ.ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕೃಷ್ಣಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಮೊಸರು ಕುಡಿಕೆ ಕಾರ್ಯಕ್ರಮ ನಡೆಯುವ ಸಮಯದಲ್ಲಿ ಮತೀಯವಾಗಿ ಅತೀ ಸೂಕ್ಷ್ಮ ಪ್ರದೇಶವಾಗಿರುವ ಸ್ಥಳಗಳಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣವಾಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಡುವ ಸಾಧ್ಯತೆ ಇರುವುದರಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1) ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ದಂಡಾಧಿಕಾರಿ ದ.ಕ ಜಿಲ್ಲೆ ಕೆ.ಜಿ. ಜಗದೀಶ ಅವರು ಜಿಲ್ಲೆಯ ವಿವಿದೆಡೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 15 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಬಂಟ್ವಾಳ ಗ್ರಾಮಾಂತರ ಸಂಗಬೆಟ್ಟು, ಸಿದ್ಧಕಟ್ಟೆ, ಮಂಚಿ, ಅಮ್ಮುಂಜೆ ಗ್ರಾಮದ ಬೆಂಜನಪದವು ವ್ಯಾಪ್ತಿಯ ಮದ್ಯ ಮಾರಾಟ ಮತ್ತು ಬಾರ್‍ಗಳಲ್ಲಿ. ಆಗಸ್ಟ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿ. ಆಗಸ್ಟ್ 20 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಬಂಟ್ವಾಳ ಗ್ರಾಮಾಂತರದ ಸರಪಾಡಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ನಿಷೇಧಾಜ್ಞೆ ಇರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟ ವೈನ್ ಶಾಪ್, ಬಾರ್‍ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು)ಗಳನ್ನು ಕಡ್ಡಾಯವಾಗಿ ಮಾಡುವಂತೆ ವ್ಯವಸ್ಥೆಗೊಳಿಸಲು ಅಧಿಸೂಚನೆ ಅವಧಿಯಲ್ಲಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.